LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ


ಬಳ್ಳಾರಿ,ಜು.29



ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್‌ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಹಾಗೂ ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುತ್ತದೆ.

ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದುಕೊಂಡು, ಭರ್ತಿಮಾಡಿ ಆಗಸ್ಟ್ 09 ಸಂಜೆ 5.30 ರೊಳಗಾಗಿ ಖುದ್ದಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು