Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ವಚನ ಕಲ್ಯಾಣ ನಾಟಕಕ್ಕೆ ಕಲಾವಿದರ ಆಯ್ಕೆ: ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸಿದ್ಧಪಡಿಸಲಾಗುತ್ತಿರುವ
ವಚನ ಕಲ್ಯಾಣಎಂಬ 9 ಗಂಟೆಗಳ ಕಾಲಾವಧಿಯ ಅಹೋರಾತ್ರಿ ನಾಟಕ ಪ್ರದರ್ಶನಕ್ಕಾಗಿ ಪ್ರತಿಭಾವಂತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.

ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿರುವ ಈ ಬೃಹತ್ ರಂಗ ಪ್ರಯೋಗದಲ್ಲಿ ಭಾಗವಹಿಸಲು ಆಸಕ್ತಿಯಿರುವ ಯುವಕ-ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ 18 ರಿಂದ 40 ವರ್ಷಗಳು. ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 20 ರೊಳಗೆ ಸದಸ್ಯ ಕಾರ್ಯದರ್ಶಿಗಳು, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ತಲುಪುವಂತೆ ಅಥವಾ ಇ-ಮೇಲ್ ಮೂಲಕ: [email protected] ವಿಳಾಸಕ್ಕೂ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲ ಪೂರ್ಣಕಾಲಿಕವಾಗಿ ತರಬೇತಿ ಹಾಗೂ ಪ್ರದರ್ಶನಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ಈ ಅವಧಿಯಲ್ಲಿ ಕಲಾವಿದರಿಗೆ ಮಾಸಿಕ ಗೌರವಧನ ನೀಡಲಾಗುವುದು ಹಾಗೂ ಊಟ-ವಸತಿ ವ್ಯವಸ್ಥೆಯನ್ನು ಇಲಾಖೆಯೇ ಕಲ್ಪಿಸಲಿದೆ. ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ವೆಬ್‍ಸೈಟ್ kannadasiri.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.

 ಹೆಚ್ಚಿನ ಮಾಹಿತಿಗಾಗಿ ನಾಟಕದ ನಿರ್ದೇಶಕ ಸಿ. ಬಸವಲಿಂಗಯ್ಯ ಅವರ ಮೊಬೈಲ್ ಸಂಖ್ಯೆ 94485 38620 ಗೆ ಸಂಪರ್ಕಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ