Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಇನಾಮದಾರ ಶುಗರ್ಸ್‌ನಲ್ಲಿ ಕೇನ್ ಕ್ಯಾರಿಯರ್ ಪೂಜಾ ಸಮಾರಂಭ

ಮರಕುಂಬಿ: ಸ್ಥಳೀಯ ಇನಾಮದಾರ ಶುಗರ್ಸ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬುಧವಾರ, ದಿನಾಂಕ 21.10.2026 ರಂದು ಸನ್‌ 2026-27ನೇ ಸಾಲಿನ ಹಂಗಾಮಿನ ಕೇನ್ ಕ್ಯಾರಿಯರ್ ಪೂಜಾ ಸಮಾರಂಭವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತಿಪೂರ್ವಕವಾಗಿ ನೆರವೇರಿಸಲಾಯಿತು.
ಮುರಗೋಡದ ದುರದುಂಡೀಶ್ವರ ಮಠದ ಪರಮಪೂಜ್ಯ ಶ್ರೀ ನೀಲಕಂಠ ಸ್ವಾಮೀಜಿ, ಬೈಲಹೊಂಗಲ-ಹೊಸೂರ ಶಾಖಾ ಮೂರುಸಾವಿರ ಮಠದ ಶ್ರೀ ಪ್ರಭು ನೀಲಕಂಠ ಸ್ವಾಮೀಜಿ, ಇಂಚಲ ಮಠದ ಪರಮಪೂಜ್ಯ ಶ್ರೀ ಪೂರ್ಣಾನಂದ ಸ್ವಾಮೀಜಿ, ಹೊಸೂರಿನ ಶ್ರೀ ಗುರು ಮಡಿವಾಳೇಶ್ವರ ಗಂಗಾಧರ ಸ್ವಾಮೀಜಿ ಹಾಗೂ ನಯಾನಗರದ ಸುಖದೇವಾನಂದ ಮಠದ ಶ್ರೀ ಸುಖದೇವಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭ ಜರುಗಿತು. ಪೂಜ್ಯರು ಸದರಿ ಕಾರ್ಯಕ್ರಮದ ಆಶೀರ್ವಚನ ನೀಡುತ್ತಾ ಇನಾಮ್ದಾರ್ ಸಕ್ಕರೆ ಕಾರ್ಖಾನೆ ಅತಿ ಕಡಿಮೆ ಅವಧಿಯಲ್ಲಿ ಪ್ರಾರಂಭವಾಗಿದ್ದು ಈ ಭಾಗದ ರೈತ ಬಾಂಧವರಿಗೆ ಕಾಮಧೇನು ಆಗಿ ಕಾರ್ಯನಿರ್ವಹಿಸುತ್ತಿದೆ ಆಡಳಿತ ಮಂಡಳಿಯವರು ಈ ಭಾಗದ ರೈತ ಭಾಂದವರ ಹಾಗೂ ಸ್ಥಳೀಯ ಯುವಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಸಾಕಷ್ಟು ಯೋಜನೆ ಹಾಕಿದ್ದು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢವಾಗಲು ಹಾಗೂ ಕಾರ್ಖಾನೆಯ  ಏಳಿಗೆಗಾಗಿ ಸಹಕರಿಸಲು  ಆಶಿರ್ವದಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀ ವಿಜಯ ಎಸ್. ಮೆಟಗುಡ್ಡ, ಶ್ರೀ ವಿಕ್ರಮ ಇನಾಮದಾರ ಹಾಗೂ ಶ್ರೀ ಜಯರಾಜ ಎಸ್. ಮೆಟಗುಡ್ಡ ಅವರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವೇದಮೂರ್ತಿ ಶ್ರೀ ದಯಾನಂದ ಮುಪ್ಪಯ್ಯನವರಮಠ ಹಾಗೂ ಅವರ ಸಂಗಡಿಗರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಖಾನೆಯ ನಿರ್ದೇಶಕರಾದ ಶ್ರೀ ವಿಜಯ ಎಸ್. ಮೆಟಗುಡ್ಡ ಅವರು, ಕಾರ್ಖಾನೆಯ ಚೇರ್ಮನ್ ಹಾಗೂ ಮಾರ್ಗದರ್ಶಕರಾದ ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷರಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಮತ್ತು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅಮಿತ ಕೋರೆ ಅವರ ಮಾರ್ಗದರ್ಶನದಲ್ಲಿ, ಆಡಳಿತ ಮಂಡಳಿಯ ಸಹಕಾರದೊಂದಿಗೆ ಮುಂಬರುವ ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಯನ್ನು ಯಶಸ್ವಿಯಾಗಿ ಪ್ರಾರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಖಾನೆಯ ಸಹಕಾರದೊಂದಿಗೆ ಸುಮಾರು 5000 ಏಕರೆ ರೈತರಿಗೆ ಹನಿ ಹಾಗೂ ಏತನೀರಾವರಿ ಯೋಜನೆಗೆ ಕ್ರಮಕೈಗೊಂಡಿದ್ದು ಆದಷ್ಟು ಬೇಗನೆ ಕಾರ್ಯಾರಂಭಿಸಲಾಗುವುದೆಂದು ತಿಳಿಸಿದರು. ಮುಂದುವರೆದು ರೈತರಿಗೆ ಕೆ,ಎಲ್‌,ಇ ಕೃಷಿ ವಿಜ್ಞಾನ ಕೇಂದ್ರದಿಂದ ರೈತಭಾಂಧವರಿಗೆ ಮಣ್ಣಿನ ಹಾಗೂ ವೈಜ್ಞಾನಿಕ ಬಳಕೆಯ ಬಗ್ಗೆ ವಿಶೇಷ ತರಬೇತಿಯನ್ನು ಕೊಡಲಾಗುವದೆಂದು ತಿಳಿಸಿದರು. ಕಾರ್ಖಾನೆಯ ಆವರಣದಲ್ಲಿ “ಕಿಸಾನ ಮಳಿಗೆ” ಪ್ರಾರಂಭಿಸಿದ್ದು ರಿಯಾಯಿತಿ ದರದಲ್ಲಿ ವ್ಯವಸಾಯಕ್ಕೆ ಬೇಕಾದ ಎಲ್ಲ ರೀತಿಯ ಗೊಬ್ಬರ ಹಾಗೂ ಇತರ ಸಲಕರಣೆಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು. ಸುತ್ತಲಿನ ರೈತ ಬಾಂಧವರು ಸದರಿ ಯೋಜನೆಯ ಎಲ್ಲಾ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಪೂರೈಸುವ ಮೂಲಕ ಕಾರ್ಖಾನೆಯ ಅಭಿವೃದ್ಧಿ ಹಾಗೂ ಪ್ರಗತಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಖಾನೆಯ ಮುಖ್ಯ ಆಡಳಿತ ಅಧಿಕಾರಿಗಳಾದ ಶ್ರೀ ರವೀಂದ್ರ ಪಟ್ಟಣಶೆಟ್ಟಿ ಅವರು ಮಾತನಾಡಿ, ಕಾರ್ಖಾನೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಆಡಳಿತ ಮಂಡಳಿ ಬದ್ಧವಾಗಿದೆ. ರೈತರ ಸಹಕಾರದೊಂದಿಗೆ ಮುಂಬರುವ ಹಂಗಾಮಿನಲ್ಲಿ ಉತ್ತಮ ಕಾರ್ಯನಿರ್ವಹಣೆ ಸಾಧಿಸುವ ವಿಶ್ವಾಸವಿದೆ. ಈ ಭಾಗದಲ್ಲಿ ಕಾರ್ಖಾನೆ ಕಾರ್ಯಾರಂಭ ಮಾಡಿರುವುದರಿಂದ ಕಬ್ಬು ಬೆಳೆಗಾರರಿಗೆ ಉತ್ತಮ ಸೇವೆ ಒದಗಿಸುವುದರ ಜೊತೆಗೆ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಸಾಧ್ಯವಾಗಿದೆ. ಕಾರ್ಖಾನೆಯನ್ನು ಹೊಸದಾಗಿ ಪ್ರಾರಂಭಿಸಿದರು ಕೂಡ ಕಾರ್ಮಿಕರ ಹಿತ ದೃಷ್ಟಿಯಿಂದ ಕಾರ್ಮಿಕರ ವೇತನವನ್ನು ಸೂಕ್ತವಾಗಿ ಹೆಚ್ಚಿಸಿ, ಅದೇ ರೀತಿ ಕಬ್ಬು ಕಳಿಸಿದ ರೈತ ಬಾಂಧವರಿಗೆ ನಿಗದಿತ ಸಮಯದಲ್ಲಿ ಯೋಗ್ಯದರ ನೀಡಿ ನಿಗದಿತ ಅವಧಿಯೊಳಗೆ ಬಟವಡೆ ಮಾಡಲಾಗಿದೆ ಎಂದು ತಿಳಿಸಿದರುಕಾರಣ ಕಾರ್ಮಿಕರು ಹೆಚ್ಚು ಶ್ರದ್ದೆಯಿಂದ ಶ್ರಮ ವಹಿಸಿ ಶ್ರಮವಹಿಸಿ ಜಾಗರೂಕತೆಯಿಂದ ಕೆಲಸ ನಿರ್ವಹಿಸಲು ತಿಳಿಸಿದರು .ರೈತ ಬಾಂಧವರು ತಾವು ಬೆಳೆಗಿಂತ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸಲು ವಿನಂತಿಸಿದರು.
ಗಣ್ಯರ ಉಪಸ್ಥಿತಿ: ಕೇನ್ ಕ್ಯಾರಿಯರ್ ಪೂಜಾ ಸಮಾರಂಭದಲ್ಲಿ ಹಿರಿಯರಾದ ಶ್ರೀಶೈಲ ಮೆಟಗುಡ್ಡ, ವಾಸನಗೌಡ ಪಾಟೀಲ, ಉದ್ಯಮಿಗಳಾದ ಸುನೀಲ ಮೆಟಗುಡ್ಡ, ಶ್ರೀ ಸುನೀಲ ಮರಕುಂಬಿ, ಶ್ರೀ ಶಿವಾನಂದ ಬಡ್ಡಿಮನಿ, ಶ್ರೀ ಜಗದೀಶ ಬೂದಿಹಾಳ, ಶ್ರೀ ನಾಮದೇವ ಸಿಂಗಣ್ಣವರ, ಸುಭಾಷ ತುರಮರಿ, ಶ್ರೀ ಈರಣ್ಣ ಚಿಕ್ಕೊಪ್ಪ, ಶ್ರೀ ಶ್ರೀಕಾಂತ ಸುಂಕದ, ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೀ ವಿ. ಸುಬ್ಬುರತಿನಂ, ತಾಂತ್ರಿಕ ವಿಭಾಗದ ವ್ಯವಸ್ಥಾಪಕರಾದ ಶ್ರೀ ಅರುಣಕುಮಾರ, ವಿವಿಧ ವಿಭಾಗಗಳ ಮುಖ್ಯಸ್ಥರು, ಕಾರ್ಮಿಕರು, ಸಿಬ್ಬಂದಿವರ್ಗದವರು, ಗುತ್ತಿಗೆದಾರರು, ಸುತ್ತಮುತ್ತಲಿನ ಗ್ರಾಮಗಳ ರೈತರು ,ಹಿತೈಷಿಗಳು ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು, ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
ಸಮಾರಂಭವು ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ನೆರವೇರಿತು. ಮುಂಬರುವ ಕಬ್ಬು ನುರಿಸುವ ಹಂಗಾಮು ಯಶಸ್ವಿಯಾಗಿ ನಡೆಯಲಿ ಹಾಗೂ ಕಾರ್ಖಾನೆ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಪೂರಕವಾಗಲಿ ಎಂಬ ಆಶಯದೊಂದಿಗೆ ಪೂಜಾ ಕಾರ್ಯಕ್ರಮ ಸಂಪನ್ನಗೊಂಡಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ