ನವದೆಹಲಿ: ದೆಹಲಿಯ ಕೆಂಪುಕೋಟೆ ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರು, ಸ್ಫೋಟಕ್ಕೂ ಮುನ್ನ ಮಸೀದಿಯ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಹೊರಬಂದಿದೆ.
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ವಾಹನ ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್‌ಗೆ ಪ್ರವೇಶಿಸಿ ಸಂಜೆ 6:48ಕ್ಕೆ ಹೊರಟಿದೆ.
ಆ ನಂತರ ಕೆಲವೇ ನಿಮಿಷಗಳಲ್ಲಿ, ಸಂಜೆ 6:52ರಿಂದ 7:00ರೊಳಗೆ ಕೆಂಪುಕೋಟೆ ಬಳಿಯಲ್ಲಿ ಸ್ಫೋಟ ಸಂಭವಿಸಿದೆ.
ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ವೇಳೆ ಕಾರಿನಲ್ಲಿ ನೀಲಿ ಮತ್ತು ಕಪ್ಪು ಬಣ್ಣದ ಟೀ ಶರ್ಟ್, ಮುಖಕ್ಕೆ ಮಾಸ್ಕ್ ಧರಿಸಿದ್ದ ಚಾಲಕ ಒಬ್ಬನೇ ಕುಳಿತ್ತಿದ್ದ
ನವದೆಹಲಿ: ದೆಹಲಿಯ ಕೆಂಪುಕೋಟೆ ಕಾರು ಸ್ಫೋಟಕ್ಕೆ ಸಂಬಂಧಿಸಿದ ಹುಂಡೈ ಐ20 ವಾಹನವನ್ನು ಸ್ಫೋಟಕ್ಕೂ ಮುನ್ನ ಮಸೀದಿಯ ಬಳಿ ಸುಮಾರು ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಹೊಸ ಮಾಹಿತಿ ಹೊರಬಂದಿದೆ.
ತನಿಖಾಧಿಕಾರಿಗಳು ಈಗ ದರ್ಯಗಂಜ್ ಕಡೆಗೆ ಹೋಗುವ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ. ಕಾರು ಎಲ್ಲಿಂದ ಆಗಮಿಸಿದೆ ಎನ್ನುವುದರ ಜಾಡು ಹಿಡಿಯಲು 100ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಏತನ್ಮಧ್ಯೆ ದೆಹಲಿ ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ. ಉಮರ್ ಇನ್ನೂ ಇಬ್ಬರು ಸಹಚರರೊಂದಿಗೆ ದಾಳಿಯನ್ನು ಯೋಜಿಸಿದ್ದಲ್ಲದೆ ಕಾರಿನಲ್ಲಿ ಡಿಟೋನೇಟರ್ ಅಳವಡಿಸಿದ್ದ ಎಂದು ಮೂಲಗಳು ತಿಳಿಸಿವೆ. ಇದೀಗ ಡಾ. ಉಮರ್ ಮೊಹಮ್ಮದ್ ನಿಜವಾಗಿಯೂ ಕಾರಿನಲ್ಲಿದ್ದನೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮೃತರ ಡಿಎನ್‌ಎ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ.