LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

ಮೆಕ್ಸಿಕೋ : 3,000 ಕಾರುಗಳನ್ನು ಮೆಕ್ಸಿಕೋಗೆ ಸಾಗಿಸುತ್ತಿದ್ದ ಕಾರ್ಗೋ ಶಿಪ್‌ (ಸರಕು ಸಾಗಣೆ ಹಡಗು – Cargo Ship) ಉತ್ತರ ಪೆಸಿಫಿಕ್ ಸಾಗರದಲ್ಲಿ ಮುಳುಗಡೆಯಾಗಿದೆ.

ʻಮಾರ್ನಿಂಗ್ ಮಿಡಾಸ್ʼ ಹೆಸರಿನ ಸುಮಾರು 600 ಅಡಿ ಉದ್ದದ ಕಾರ್ಗೋ ಶಿಪ್‌ ಹಡಗು ನಿರ್ವಹಣಾ ಕಂಪನಿ ಲಂಡನ್​​ನ ಜೋಡಿಯಾಕ್ ಮ್ಯಾರಿಟೈಮ್ ನಿರ್ವಹಣೆ ಮಾಡುತ್ತಿತ್ತು. ಹೊಸ ಕಾರುಗಳನ್ನು ಅಲಾಸ್ಕಾದ ಅಡಕ್ ದ್ವೀಪದಿಂದ ಹೊತ್ತು ಮೆಕ್ಸಿಕೋದ ಬಂದರಿಗೆ ಸಾಗುತ್ತಿತ್ತು. ಭೂಪ್ರದೇಶದಿಂದ 300 ಮೈಲುಗಳು (490 ಕಿ.ಮೀ) ದೂರದಲ್ಲಿ ಸಾಗುತ್ತಿದ್ದಾಗ, ಜೂನ್ 3 ರಂದು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ತಕ್ಷಣವೇ ಈ ಬಗ್ಗೆ ಹಡಗಿನಲ್ಲಿದ್ದ ಸಿಬ್ಬಂದಿ ಕೋಸ್ಟ್​ ಗಾರ್ಡ್​ಗೆ ಮಾಹಿತಿ ರವಾನಿಸಿದ್ದರು. ಪ್ರತಿಕೂಲ ಹವಾಮಾನ ಮತ್ತು ನೀರು ಸೋರಿಕೆಯಾದ ಕಾರಣ ಸಿಬ್ಬಂದಿಗೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಕಳೆದೊಂದು ವಾರದಿಂದ ಬೆಂಕಿಯಲ್ಲಿ ಉರಿಯುತ್ತಲೇ ಹಡಗು ದಡದತ್ತ ಸಾಗಿ ಬಂದಿದೆ. ಹೀಗಾಗಿ ಹಡಗು ಸಮೇತ 800 ಎಲೆಕ್ಟ್ರಿಕ್‌ ವಾಹನಗಳೊಂದಿಗೆ ತುಂಬಿದ್ದ 3,000 ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ.

ಲಂಡನ್​​ನ ಜೋಡಿಯಾಕ್ ಮ್ಯಾರಿಟೈಮ್ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಹಾನಿಗೀಡಾದ ಹಡಗಿನ ರಕ್ಷಣೆಗೆ ಎರಡು ಹಡಗನ್ನು ರವಾನಿಸಲಾಗಿತ್ತು. ಆದ್ರೆ, ಕೆಟ್ಟ ಹವಾಮಾನದಿಂದಾಗಿ ರಕ್ಷಣೆ ಸಾಧ್ಯವಾಗಿಲ್ಲ. ಸುಮಾರು 16,404 ಅಡಿ (5,000 ಮೀ) ಆಳ ಪ್ರದೇಶದಲ್ಲಿ ಭೂಮಿಯಿಂದ 415 ಮೈಲುಗಳು (770 ಕಿಲೋಮೀಟರ್) ದೂರದಲ್ಲಿ ಹಡಗು ಮುಳುಗಿದೆ ಎಂದು ತಿಳಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026