ಕಾಮಿಡಿ ಕಿಲಾಡಿಗಳು ಜಾತಿಯ ನಟಿ ನಯನಾ ವಿರುದ್ಧ ಜಾತಿನಿಂದನೆ ಕೇಸ್ ದಾಖಲು.!
ಕಲಬುರಗಿ: ಹೌದು ಕಾಮಿಡಿ ಕಿಲಾಡಿಗಳು ನಟಿ ನಯನಾ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ.
ಕಾರಣ ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದರು ಎಂದು ಹೇಳಲಾಗಿದೆ. ನಯನಾ ಹೇಳಿಕೆ ಕುರಿತಾಗಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ನಂತರದಲ್ಲಿ ಅವರು ಕ್ಷಮೆ ಕೂಡ ಕೇಳಿದ್ದರು. ಇದೀಗ ಅವರ ವಿರುದ್ಧ ಕೇಸ್ ದಾಖಲಾಗಿದೆ.
ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಯನಾ ವಿರುದ್ಧ ಕೇಸ್ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಅವಮಾನ ಮಾಡಿದ ಆರೋಪದಡಿ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ದೂರು ನೀಡಿದ್ದರು. ಹಾಗಾಗಿ ಕೇಸ್ ದಾಖಲಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.