LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸರ ದಾಳಿ..!

ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.


 
ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ BLACK MOON RESTO CAFÉ ಎಂಬ ಹೆಸರಿನಲ್ಲಿ ಕಾನೂನುಬಾಹಿರವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಗೆ ದಾಳಿ ನಡೆಸಲಾಗಿದೆ. ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದ ಆರೋಪಿಗಳಾದ ಸಿದ್ದೀಕ್ ಯಾನೆ ಎಂ.ಎಫ್.ಸಿ.ಸಿದ್ದೀಕ್, ಅಬ್ದುಲ್ ನಾಸಿರ್ ಮತ್ತು ಸಫ್ವಾನ್ ಎಂಬವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರಿಂದ ತಿಳಿದು ಬಂದಿದೆ.

 


2023-24ರಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆದಿದ್ದ ಆರೋಪಿಗಳು ಕೆಫೆಟೇರಿಯಾ ನೆಪದಲ್ಲಿ ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದರು. ಇವರು ನಿಯಮಗಳನ್ನು ಉಲ್ಲಂಘಿಸಿ ಯುವಕರನ್ನು ಮಾದಕ ಭ್ರಮಾ ಲೋಕದಲ್ಲಿ ತೇಲಿಸಿ ಹೆಚ್ಚಿನ ಹಣ ಸಂಪಾದಿಸಿ ಅಪರಾಧವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹುಕ್ಕಾ ಬಾರ್ ನಿಂದ ಹುಕ್ಕಾ ಸೇದುವ ಉಪಕರಣಗಳು, ತಂಬಾಕು ಉತ್ಪನ್ನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ. ನೇತೃತ್ವದಲ್ಲಿ ಪಿಎಸ್ಸೈ ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ಎಎಸ್ಸೈ ಸುಜನ್ ಶೆಟ್ಟಿ ಹಾಗೂ ಸಿಸಿಬಿ ಸಿಬ್ಬಂದಿ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣಾ ಪಿಎಸ್ಸೈ ಮನೋಹರ್ ಪ್ರಸಾದ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026