Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿನಯ ಜಾಮೀನು ಕಾರ್ಯಕರ್ತರ ಸಂಭ್ರಮ

ಧಾರವಾಡ,01 : ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್ ಜಾಮೀನು.ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ  ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಿನಯ ಕುಲಕರ್ಣಿ ಅವರನ್ನು ತಪ್ಪಿತಸ್ಥ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ತೀರ್ಪಿನ ಬಳಿಕ ಧಾರವಾಡದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬೆಂಬಲಿಗರು ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮಾ ಬಲೋಗಿ ಅವರ ನೇತ್ರತ್ವದಲ್ಲಿ  ಸಂಭ್ರಮಾಚರಣೆ ನಡೆಸಿದರು. ಧಾರವಾಡದ ಜೂಬ್ಲಿ ವೃತ್ತದಲ್ಲಿ ಜಮಾಯಿಸಿದ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ, ಪರಸ್ಪರ ಅಭಿನಂದನೆ ಸಲ್ಲಿಸಿ ತೀರ್ಪನ್ನು ಸ್ವಾಗತಿಸಿದರು.ವಿನಯ ಪರ ಜಯಘೋಷಗಳನ್ನು ಕೂಗಿ ಸಂತಸ ವ್ಯಕ್ತಪಡಿಸಿದರು.ನ್ಯಾಯದ ಪರವಾಗಿ ತೀರ್ಪು ಬಂದಿದೆ ಎಂದು ಹೇಳಿದ ಬೆಂಬಲಿಗರು, ನ್ಯಾಯಾಂಗದ ಮೇಲಿನ ತಮ್ಮ ವಿಶ್ವಾಸ ಮತ್ತಷ್ಟು ಬಲವಾಗಿದೆ ಎಂದು ಅಭಿಪ್ರಾಯಪಟ್ಟರು.
ಹಾಗೆಯೇ, ವಿನಯ ಕುಲಕರ್ಣಿ ಅಭಿಮಾನಿ ಬಳಗದಿಂದ ನಗರದ ಗಾಂಧಿಚೌಕ್‌ನಲ್ಲಿ ನೂರಾರು ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಮಾಡಲಾಯಿತು, 
ಗೌರಮ್ಮ ಬೋಲೋಗಿ,  ಬಸವರಾಜ ಜಾಧವ ಕಾಜಾಸಾಭ ದೂಡ್ಡಮನಿ. ಶಿವಣ್ಣ ನಿಗದಿ.ನಾರಾಯಣ ಸುಳ್ಳದ.ಶಿವಾನಂದ ಗಿರಿಯಪ್ಪನವರ ಇತರರು. ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ