LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ಜನಸ್ನೇಹಿ ಬಜೆಟ್ : ಬಿ.ವೈ. ವಿಜಯೇಂದ್ರ

ಶಿವಮೊಗ್ಗ,ಫೆ.02 : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ಗೆ ಎಲ್ಲೆಡೆ ವ್ಯಾಪಕ  ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಅವರು ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಸ್ಪಷ್ಟತೆಯಿಂದ ಸ್ಪಷ್ಟತೆಯೆಡೆಗೆ ನಡೆಯುವ ಜನಪ್ರಿಯತೆಗಿಂತ ಜನಹಿತ ಮುಖ್ಯ ಎಂದು ವಿತ್ತ ಸಚಿವರು ತಮ್ಮ ಬಜೆಟ್‌ನಲ್ಲಿ ಸಾಬೀತು ಪಡಿಸಿದ್ದಾರೆ ಎಂದರು.
ಈ ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಕ್ಕೂ ಆದ್ಯತೆ ನೀಡಲಾಗಿದೆ. ಕೈಗಾರಿಕೆ, ಪ್ರವಾಸೋದ್ಯಮ, ಐ.ಟಿ.-ಬಿ.ಟಿ., ಕೃಷಿ, ರೈಲು, ವಿಮಾನ, ರಸ್ತೆ, ಹೀಗೆ ಎಲ್ಲಾ ಆದ್ಯತಾ ಕ್ಷೇತ್ರಗಳಿಗೂ ಪ್ರಾಮುಖ್ಯತೆ ನೀಡಲಾಗಿದ್ದು, ಇದೊಂದು ಆರ್ಥಿಕ ಶಿಸ್ತಿನ ಬಜೆಟ್ ಆಗಿದೆ. ಈ ಬಜೆಟ್‌ನಲ್ಲಿ ಹಣಕಾಸು ಕೊರತೆಯನ್ನು ಶೇ.೪.೪ಕ್ಕೆ ತರಲಾಗಿದೆ. ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ ಎಂದರು.
ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ಮೂಲಭೂತ ಸೌಲಭ್ಯಗಳಿಗೆ ೨ ಲಕ್ಷ ಕೋಟಿ ಹಣವನ್ನು ಮೀಸಲಾಗಿಡಲಾಗಿತ್ತು. ಆದರೆ ಈಗ ಎನ್.ಡಿ.ಎ. ಸರ್ಕಾರ ಬಂದ ಮೇಲೆ ಅದನ್ನು 12.20  ಲಕ್ಷ ಕೋಟಿಗೆ ಏರಿಸಲಾಗಿದೆ. ಹಾಗಾಗಿ ಇದೊಂದು ಕ್ರಾಂತಿಕಾರಕ ಬಜೆಟ್ ಆಗಿದೆ.  ಉನ್ನತ ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ಮಹಿಳೆಯರ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು, ಮಹಿಳೆಯರಿಗೆ ಉದ್ಯಮ ಆರಂಬಿಸಲು ಕೂಡ ಯೋಜನೆಗಳನ್ನು ರೂಪಿಸ ಲಾಗಿದೆ. ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲೂ ಹಾಸ್ಟೆಲ್‌ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಪ್ರಮುಖವಾಗಿ ಯುವಜನತೆಗೆ ಆದ್ಯತೆ ನೀಡಲಾಗಿದೆ. ಇದರಿಂದ ಸಹಜವಾಗಿಯೇ ಭಾರತ ಅಭಿವೃದ್ಧಿಯಾಗುತ್ತದೆ ಎಂದರು.
ರಾಜ್ಯ ಸರ್ಕಾರ ವಿನಾಕಾರಣ ಕೇಂದ್ರದ ಮೇಲೆ ಪದೇ ಪದೇ ಅನುದಾನ ಕುರಿತು ಮಾತನಾಡುತ್ತಲೇ ಇದೆ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ. ಈ ಬಜೆಟ್ಟನ್ನು ಅವರು ಸರಿಯಾಗಿ ಗಮನಿಸಲಿ, ಅವರಿಗೆ ಗೊತ್ತಾಗುತ್ತದೆ. ರಾಜ್ಯಗಳಿಗೆ ನೀಡುವ ತೆರಿಗೆಯ ಅನುದಾನವನ್ನು ಶೇ.3.6 ರಿಂದ 4.13 ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದಿಂದ ರಾಜ್ಯಕ್ಕೆ ಸುಮಾರು 7387  ಕೋಟಿ ರೂ. ಹೆಚ್ಚಾಗುತ್ತಿದ್ದು,5 ವರ್ಷದಲ್ಲಿ ಅದು 63.050 ಕೋಟಿ ಹೆಚ್ಚಾಗುತ್ತದೆ.
ಇದು ಕೇಂದ್ರ ಸರ್ಕಾರದ ಕೊಡುಗೆ ಅಲ್ಲವೇ ಎಂದ ಅವರು, ರಾಜ್ಯ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ತೋರಿಸುವ ಬದಲು ಮನವೊಲಿಸಿ ಅನುದಾನವನ್ನು ತರಿಸಿಕೊಳ್ಳಬೇಕು. ಒಕ್ಕೂಟ ವ್ಯವಸ್ಥೆಗೆ ಮೊದಲು ಗೌರವ ಕೊಡುವುದನ್ನು ಕಲಿಯಬೇಕು. ಈ ಮೊದಲು ರಾಜ್ಯ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದರು. ಈಗ ಇಡೀ ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದಾರೆ.  ಆ ಮೂಲಕ ಸಿದ್ದರಾಮಯ್ಯನವರು ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ನಕ್ಸಲ್ ಸಮಸ್ಯೆಯನ್ನು ಸಂಪೂಣವಾಗಿ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ 65 ಜಿಲ್ಲೆಗಳಲ್ಲಿ ನಕ್ಸಲ್ ಸಮಸ್ಯೆ ಇತ್ತು. ಈಗ ಕೇವಲ 10 ಜಿಲ್ಲೆಗಳಲ್ಲಿ ಮಾತ್ರ ಇದೆ ಎಂದ ಅವರು, ದ್ವೇಷ ಭಾಷಣ ಕುರಿತಂತೆ ಕಾಯ್ದೆ ಕುರಿತು ಮಾತನಾಡಿ, ಈ ಕಾಯ್ದೆ ವಿರೋಧ ಪಕ್ಷವನ್ನು ಮಟ್ಟಹಾಕಲೆಂದೇ ರೂಪಿಸಲಾಗಿದೆ. ಸದನದಲ್ಲಿ ಯಾವ ಚರ್ಚೆಗೂ ಒಳಪಡಿಸಲಿಲ್ಲ. ಪ್ರಜಾಪ್ರಭುತ್ವಕ್ಕೆ ಇದು ಮಾರಕವಾಗಿ ಕಾಯ್ದೆಯಾಗಿದೆ. ಈಗಾಗಲೇ ಹಿಂದೂ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.
ದ್ವೇಷ ಭಾಷಣ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ತರಾತುರಿಯಲ್ಲಿ ಯಾವುದೇ ಚರ್ಚೆ ನಡೆಸದೇ ಪಾಸ್‌ಮಾಡಿತು. ವಿರೋಧಪಕ್ಷಗಳನ್ನು ಕಟ್ಟಿ ಹಾಕುವ ಸಲುವಾಗಿ ಈ ಮಸೂದೆಯನ್ನು ತರಲು ಪ್ರಯತ್ನಿಸುತ್ತಿದೆ. ರಾಜ್ಯಪಾಲರು ಇದನ್ನು ರಾಷ್ಟ್ರಪತಿಗಳಿಗೆ ಕಳುಹಿಸಿರುವುದು ಸ್ವಾಗತಾರ್ಹ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಮಾಜಿ ಶಾಸಕರಾದ ಅಶೋಕ್‌ನಾಯ್ಕ, ಎಸ್.ರುದ್ರೇಗೌಡ್ರು, ಮಾಲತೇಶ್, ಸುಧಾಕರ್, ರಘು, ಎಸ್.ಚಂದ್ರಶೇಖರ್, ಮಂಜುನಾಥ್ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST