LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗುಂಬೆ ಘಾಟಿ ಸುರಂಗ ಮಾರ್ಗಕ್ಕೆ ಕೇಂದ್ರ ಒಪ್ಪಿಗೆ

ಶಿವಮೊಗ್ಗ,ಫೆ .11 : ಕರಾವಳಿ -ಮಲೆನಾಡು ಸಂಪರ್ಕ  ಬೆಸೆಯುವ ಆಗುಂಬೆ ಘಾಟಿ ವಿಸ್ತರಣೆ ಹಾಗೂ ಟನೆಲ್ ನಿರ್ಮಾಣಕ್ಕೆ ಡಿಪಿಆರ್ ಹಾಗೂ ಕಾರ್ಯಸಾಧ್ಯತಾ ವರದಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಟೆಂಡರ್ ಆಹ್ವಾನಿಸಿದೆ.ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು ಸಿಕ್ಕಂತಾಗಿದ್ದು,  ಈ ಯೋಜನೆಯಡಿ ರಸ್ತೆಯನ್ನು ಎರಡು ಲೇನ್‌ಗಳಿಗೆ ವಿಸ್ತರಿಸುವುದರ ಜತೆಗೆ ಎರಡೂ ಬದಿ ಪಾದಚಾರಿ ಮಾರ್ಗ ಕಲ್ಪಿಸುವ ಉದ್ದೇಶವಿದೆ.
ಸುದ್ದಿಗಾರರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಗಮನಾರ್ಹ ವಾಗಿ ಡಿಪಿಆರ್ ವ್ಯಾಪ್ತಿಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಕಾರ್ಯ ಸಾಧ್ಯತೆಯನ್ನು ಪರಿಶೀಲಿಸುವ ಅಂಶವೂ ಸೇರಿದ್ದು, ಸುರಂಗ ವಿನ್ಯಾಸ ತಜ್ಞರು ಹಾಗೂ ಹಿರಿಯ ಭೂ-ಭೌತಶಾಸ್ತ್ರಜ್ಞರ ಸೇವೆ ಪಡೆಯಲು, ಭೂ-ತಾಂತ್ರಿಕ ತನಿಖೆ ನಡೆಸಲು ಪ್ರತ್ಯೇಕ ಬಜೆಟ್ ವ್ಯವಸ್ಥೆ ಮಾಡಲಾಗಿದೆ. ಈ ಡಿಪಿಆರ್ ಅನ್ನು ಆರು ತಿಂಗಳೊಳಗೆ ಸಿದ್ಧಪಡಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ 2.33 ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ದಶಕಗಳಿಂದ ಬಾಕಿ ಉಳಿದಿದ್ದ ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸುವ ಜನರ ಬೇಡಿಕೆಗೆ ಇದು ಸ್ಪಷ್ಟ ಮತ್ತು ನಿರ್ಣಾಯಕ ಮೊದಲ ಆಡಳಿತಾತ್ಮಕ ಹೆಜ್ಜೆಯಾಗಿದೆ. ಪರಿಸರ ಸಂವೇದನಾಶೀಲ ಪಶ್ಚಿಮ ಘಟ್ಟ ಪ್ರದೇಶದ ಪ್ರಕೃತಿ ಸಮತೋಲನಕ್ಕೆ ಗೌರವ ನೀಡುತ್ತಲೇ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ.
ಡಿಪಿಆರ್ ಪ್ರಕ್ರಿಯೆ ಆರಂಭವಾಗಿ ರುವುದೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸುತ್ತಿರುವುದಕ್ಕೆ ಸಾಕ್ಷಿ. ಈ ರಸ್ತೆ ಅಭಿವೃದ್ಧಿಯಿಂದ ಮಲೆ ನಾಡು ಹಾಗೂ ಕರಾವಳಿ ಜಿಲ್ಲೆಗಳ ಸಂ ರ್ಕ ಸುಧಾರಣೆಯಾಗಲಿದ್ದು, ಸ್ಥಳೀಯ ಜನತೆ, ರೈತರು, ಪ್ರವಾಸೋದ್ಯಮ ಮತ್ತು ತುರ್ತು ಸೇವೆಗಳಿಗೆ ಮಹತ್ವದ ಲಾಭವಾಗಲಿದೆ ಎಂದರು.
ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಜೊತೆಗೆ ಅಪಾಯಕಾರಿ ಹಾಗೂ ಅಪಘಾತಗಳಿಗೆ ಹೆಸರಾದ ಆಗುಂಬೆ ಘಾಟ್ ರಸ್ತೆಯ ಸುರಕ್ಷತೆ ಹೆಚ್ಚಿಸುವುದು, ಪಶ್ಚಿಮ ಘಟ್ಟ ಪ್ರದೇಶದ ಪ್ರಕೃತಿ ಸಂವೇದನಾಶೀಲತೆಗೆ ಗೌರವ ನೀಡುತ್ತಲೇ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ರಾಘವೇಂದ್ರ ಹೇಳಿದ್ದಾರೆ. “ಡಿಪಿಆರ್ ಪ್ರಕ್ರಿಯೆ ಆರಂಭ ವಾಗಿರುವುದೇ ಈ ಯೋಜನೆ ಕುರಿತು ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಇದನ್ನು ಬಗ್ಗೆ ಎಷ್ಟು ಗಂಭೀರ ವಾಗಿ ಪರಿಗಣಿಸಿದೆ ಮತ್ತು ಕಾಲಮಿತಿ ಯೊಳಗೆ ಮುಗಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಈ ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಯಿಂದ ಮಲೆನಾಡು - ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ಲಭ್ಯವಾಗಲಿದ್ದು, ಸ್ಥಳೀಯ ನಿವಾಸಿಗಳು, ರೈತರು, ಅಕ್ಕಪಕ್ಕದ ಜಿಲ್ಲೆಗಳು, ಪ್ರವಾಸೋದ್ಯಮ ಹಾಗೂ ತುರ್ತು ಸೇವೆಗಳಿಗೆ ಗಣನೀಯ ಲಾಭವಾಗಲಿದೆ” ಎಂದು ಸಂಸದರು ಹೇಳಿದರು.
ಈ ಮಹತ್ವದ ನಿರ್ಧಾರಕ್ಕೆ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ಹಂತಗಳಲ್ಲಿ ಯೋಜನೆ ಸುಗಮವಾಗಿ ಸಾಗಲು ಕೇಂದ್ರದೊಂದಿಗೆ ನಿರಂತರ ಸಂಯೋಜನೆ ಮುಂದುವರಿ ಸುವುದಾಗಿ ಅವರು ಹೇಳಿದ್ದು, ಭೂಸ್ವಾಧೀನ ಮತ್ತು ಕಾನೂನು ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಈ ಬಹು ಕಾಲದ ಮಹತ್ವಪೂರ್ಣ ಯೋಜನೆ, ಯೋಜನಾ ಹಂತದಿಂದ ಕಾರ್ಯರೂಪಕ್ಕೆ ಶೀಘ್ರವಾಗಿ ಸಾಗಲಿ ಎಂಬುದು ಎಲ್ಲರ ಆಶಯವಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST