Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅನ್ನ ಭಾಗ್ಯ ಯೋಜನೆಗೆ ಜಾರಿಯಾಗದಂತೆ ಕೇಂದ್ರ ಷಡ್ಯಂತ್ರ - ಸಚಿವ ಖರ್ಗೆ ಆರೋಪ

ಸುದ್ದಿಮೂಲ ವಾರ್ತೆ

ಕಲಬುರಗಿ,ಜೂ.20: ಕೇಂದ್ರ ಸರ್ಕಾರ ರಾಜ್ಯದ ವಿರುದ್ದ ದ್ವೇಷದ ರಾಜಕಾರಣ ಪ್ರಾರಂಭಿಸಿದ್ದು ಅನ್ನ ಭಾಗ್ಯ ಯೋಜನೆ ಜಾರಿಗೊಳಿಸದಂತೆ ಷಡ್ಯಂತ್ರ ರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು, ಕನ್ನಡಿಗರ ಆಸ್ಮಿತೆಗೆ ಧಕ್ಕೆಯಾಗುತ್ತಿರುವುದಕ್ಕೆ, ನಿರುದ್ಯೋಗ ಸಮಸ್ಯೆ ಹೆಚ್ಚಿರುವುದಕ್ಕೆ ರಾಜ್ಯದ ಕನ್ನಡಗಿರು ಬಿಜೆಪಿ ವಿರುದ್ದ ಸಿಡಿದೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದಕ್ಕೆ ಕೇಂದ್ರ ಸರ್ಕಾರ ಸಹಿಸಿಕೊಳ್ಳಲು ಆಗದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ದ ದ್ವೇ಼ಷದ ರಾಜಕಾರಣ ಪ್ರಾರಂಭಿಸಿದೆ ಎಂದರು.

ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಹಾಗೂ ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿಯನ್ನು ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಜನರಿಗೆ ವಿತರಿಸುವುದಾಗಿ ಸಿಎಂ ಜೂನ್ 2 ರಂದು ಹೇಳಿದ್ದರು ಅದರಂತೆ ಭಾರತೀಯ ಆಹಾರ ನಿಗಮಕ್ಕೆ (Food Corporation of India ) ಗೆ ಪತ್ರ ಬರೆದು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಕೋರಿರುತ್ತಾರೆ. ಆಗ ಉತ್ತರಿಸಿದ ಎಫ್ ಸಿ ಐ ಜೂನ್ 12 ರಂದು ಪತ್ರ ಬರೆದು ಪ್ರತಿ ಕ್ವಿಂಟಾಲ್ ಗೆ ರೂ 3400 ರಂತೆ 2.08 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿರುತ್ತದೆ.

ಆದರೆ ಅಚ್ಚರಿಯಂತೆ, ಕೇಂದ್ರ ಆಹಾರ ಸರಬರಾಜು ಹಾಗೂ ಸಾರ್ವಜನಿಕ ವಿತರಣಾ ಇಲಾಖೆಯ ಅಣತಿಯಂತೆ ಎಫ್ ಸಿ ಐ ಜೂನ್ 13 ರಂದು ಪತ್ರ ಬರೆದು‌ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುತ್ತದೆ. ಎಫ್ ಸಿ ಐ ನಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದು ಖಾಸಗಿಯವರಿಗೆ ಸರಬರಾಜು ಮಾಡಲು ಸಿದ್ಧರಿದ್ದರೂ ಕೂಡಾ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಗಮನಿಸಿದರೆ ಕೇಂದ್ರಕ್ಕೆ ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ಬೇಕಿಲ್ಲ ಹಾಗೂ ರಾಜ್ಯವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದು ಬೇಕಿಲ್ಲ ಎಂದು ಗೊತ್ತಾಗುತ್ತದೆ ಎಂದು ಹೇಳಿದರು.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ‌ ಎಸ್ ಜೈಶಂಕರ್ ಅಮೇರಿಕಾ ಹಾಗೂ ಯೂರೋಪ್ ದೇಶಗಳಿಗೆ ಆಹಾರ ಧಾನ್ಯ ಸರಬರಾಜು ಮಾಡುವುದಾಗಿ ಹೇಳಿದ್ದಾರೆ. ಇದು ದೇಶದ್ರೋಹವಲ್ಲವೇ? ಎಂದು ಪ್ರಶ್ನಿಸಿದರು.

ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವುದಿಲ್ಲವೇ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಛತ್ರಿಸಗಡ್ ರಾಜ್ಯವನ್ನು ಸಂಪರ್ಕಸಲಾಗಿದ್ದು ಅವರು 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿದ್ದಾರೆ ಹಾಗಾಗಿ ಯೋಜನೆ ಜಾರಿಗೊಳಿಸುತ್ತೇವೆ ಆದರೆ ಜುಲೈ 1 ರಂದು ಜಾರಿಗೆ ತರಬೇಕೆಂದರೆ ಮೋದಿ‌ ಮನಸು ಮಾಡಿ ರಾಜ್ಯದ ಜನರು ಮತ ಹಾಕದಿದ್ದರೂ ಪರವಾಗಿಲ್ಲ ಎಂದು ಅಕ್ಕಿ ಸರಬರಾಜು ಮಾಡಿದರೆ ಸಾಧ್ಯವಾಗುತ್ತದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬೇಕಾಗುವಷ್ಟು ಅನುದಾನ‌ ನೀಡಲು ಸಿದ್ದವಿರುವುದಾಗಿ ಹೇಳಿದ ಸಚಿವರು, ಮಳೆ ಕೊರತೆಯಿಂದಾಗಿ ಮೋಡ ಬಿತ್ತನೆ ಕುರಿತಂತೆ ಕಂದಾಯ ಸಚಿವರು ಈಗಾಗಲೇ ಹೇಳಿಕೆ ನೀಡಿರುತ್ತಾರೆ ಎಂದರು.

ತಮ್ಮ ಆಪ್ತ ಕಾರ್ಯದರ್ಶಿ ಮಾಡಿಕೊಳ್ಳುವುದು ತಮ್ಮ ವಿವೇಚನೆ ಎಂದ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿಯ ವಿರುದ್ದ ನನ್ನ ಆರೋಪವಿತ್ತು. ಪ್ರಸ್ತುತ ನಡೆಯುತ್ತಿರುವ ಕೆಕೆಆರ್ ಡಿಬಿ ಅವ್ಯವಹಾರದ ತನಿಖೆಯಲ್ಲಿ ಆಪ್ತ ಕಾರ್ಯದರ್ಶಿ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ದವೂ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ, ಎಂ. ವೈ. ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಸುಭಾಷ ರಾಠೋಡ, ಶಿವಾನಂದ ಪಾಟೀಲ ಸೇರಿದಂತೆ ಮತ್ತಿತರಿದ್ದರು‌.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ