Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

100% ಇಥೆನಾಲ್‌ ವಾಹನಗಳಿಗೆ ಕೇಂದ್ರ ಸರಕಾರ ಅನುಮೋದನೆ

ಹೊಸದಿಲ್ಲಿ, ಜೂ.15 : 100 ಪ್ರತಿಶತ ಇಥೆನಾಲ್‌ನಲ್ಲಿ ಕಾರ್ಯನಿರ್ವಹಿಸಬಲ್ಲ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೇಂದ್ರ ಸರಕಾರ ಅಧಿಕೃತ ಅನುಮೋದನೆ ನೀಡಿದ್ದು, ಇಥೆನಾಲ್‌ ಇಂಧನಕ್ಕೆ ಕಾನೂನು ಮಾನ್ಯತೆ ದೊರೆತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ನಾಗ್ಪುರದಲ್ಲಿ ಕೇಂದ್ರ ಸರಕಾರದ 12 ವರ್ಷಗಳ ಸಾಧನೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 100 ಪ್ರತಿಶತ ಇಥೆನಾಲ್‌ಗೆ ಸಂಬಂಧಿಸಿದ ನಿಯಮಾವಳಿಗಳಿಗೆ ರವಿವಾರ ರಾತ್ರಿ ಸಹಿ ಹಾಕಿರುವುದಾಗಿ ತಿಳಿಸಿದರು.

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ದೇಶವನ್ನು ಇಂಧನ ಸ್ವಾವಲಂಬನೆಯತ್ತ ಕೊಂಡೊಯ್ಯುವುದು ಸರಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಗಡ್ಕರಿ ಹೇಳಿದರು.

ದೇಶವು ಪ್ರಸ್ತುತ ವರ್ಷಕ್ಕೆ ಸುಮಾರು 22 ಲಕ್ಷ ಕೋಟಿ ರೂ. ಮೌಲ್ಯದ ಕಚ್ಚಾ ತೈಲ ಮತ್ತು ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ. ಇಥೆನಾಲ್‌ ಬಳಕೆ ಹೆಚ್ಚುವುದರಿಂದ ಆಮದು ವೆಚ್ಚ ತಗ್ಗುವುದರ ಜೊತೆಗೆ ದೇಶದ ವಿದೇಶಿ ವಿನಿಮಯ ಉಳಿತಾಯಕ್ಕೂ ನೆರವಾಗಲಿದೆ ಎಂದು ಹೇಳಿದರು.

ಪ್ರಸ್ತುತ ಬಳಕೆಯಲ್ಲಿರುವ ಬಹುತೇಕ ವಾಹನಗಳು ಪೆಟ್ರೋಲ್‌ ಅಥವಾ ಕಡಿಮೆ ಪ್ರಮಾಣದ ಇಥೆನಾಲ್‌ ಮಿಶ್ರಿತ ಇಂಧನಕ್ಕೆ ಮಾತ್ರ ಹೊಂದಿಕೊಳ್ಳುವಂತಿವೆ. ಆದರೆ ಫ್ಲೆಕ್ಸ್‌–ಫ್ಯೂಯಲ್‌ ತಂತ್ರಜ್ಞಾನ ಹೊಂದಿರುವ ಹೊಸ ವಾಹನಗಳು 100 ಪ್ರತಿಶತ ಇಥೆನಾಲ್‌ನಲ್ಲಿಯೂ ಕಾರ್ಯನಿರ್ವಹಿಸಲಿವೆ ಎಂದು ವಿವರಿಸಿದರು.

ಮಾರುತಿ ಸುಜುಕಿ, ಟೊಯೋಟಾ, ಸುಜುಕಿ, ಹ್ಯುಂಡೈ ಹಾಗೂ ಹೀರೋ ಮೋಟೋಕಾರ್ಪ್‌ ಸೇರಿದಂತೆ ಹಲವು ಕಂಪೆನಿಗಳು ಇಂತಹ ವಾಹನಗಳ ಅಭಿವೃದ್ಧಿಯಲ್ಲಿ ತೊಡಗಿವೆ. ಮಾರುತಿ ಸುಜುಕಿಯ ವ್ಯಾಗನಾರ್‌ ಮತ್ತು ಹೀರೋ ಮೋಟೋಕಾರ್ಪ್‌ನ ಕೆಲವು ಮಾದರಿಗಳನ್ನು ಈಗಾಗಲೇ 100 ಪ್ರತಿಶತ ಇಥೆನಾಲ್‌ ಬಳಕೆಗೆ ಹೊಂದುವಂತೆ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ಎರಡು ತಿಂಗಳಲ್ಲಿ ಟೊಯೋಟಾ, ಸುಜುಕಿ ಮತ್ತು ಹ್ಯುಂಡೈ ಕಂಪೆನಿಗಳು ಹೊಸ ಇಥೆನಾಲ್‌ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸಲಿವೆ. ಇಥೆನಾಲ್‌ ಕಬ್ಬು, ಜೋಳ ಹಾಗೂ ಇತರ ಕೃಷಿ ಉತ್ಪನ್ನಗಳಿಂದ ತಯಾರಾಗುವ ನವೀಕರಿಸಬಹುದಾದ ಜೈವಿಕ ಇಂಧನವಾಗಿದೆ. ಭಾರತದಲ್ಲಿ ಹೆಚ್ಚಿನ ಪ್ರಮಾಣದ ಇಥೆನಾಲ್‌ ಕಬ್ಬಿನ ಉಪ ಉತ್ಪನ್ನವಾದ ಮೊಲಾಸಿಸ್‌ನಿಂದ ಉತ್ಪಾದನೆಯಾಗುತ್ತಿದೆ.

ಇಥೆನಾಲ್‌ ಬಳಕೆಯಿಂದ ಜೈವಿಕ ಇಂಧನ ಉದ್ಯಮಕ್ಕೆ ಉತ್ತೇಜನ ದೊರೆಯುವುದರ ಜೊತೆಗೆ, ಕಬ್ಬು ಹಾಗೂ ಇತರ ಕೃಷಿ ಉತ್ಪನ್ನಗಳನ್ನು ಬೆಳೆಯುವ ರೈತರಿಗೆ ಹೆಚ್ಚುವರಿ ಆದಾಯ ಸಿಗಲಿದೆ ಎಂದು ಗಡ್ಕರಿ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ