Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಕೇಂದ್ರ ಸಾಂಖ್ಯಿಕ ಕಚೇರಿ ಪ್ರಾದೇಶಿಕ ಕ್ರೀಡಾಕೂಟ: ಬಳ್ಳಾರಿಗೆ ಕ್ರಿಕೆಟ್, ಹುಬ್ಬಳ್ಳಿಗೆ ಬ್ಯಾಡ್ಮಿಂಟನ್ ಪ್ರಶಸ್ತಿ


ಬಳ್ಳಾರಿ,ಸೆ.17 : ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿçÃಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿçÃಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ ಕಚೇರಿ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಹುಬ್ಬಳ್ಳಿ ಪ್ರಾದೇಶಿಕ ಕಚೇರಿ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಹುಬ್ಬಳ್ಳಿ ಪ್ರಾದೇಶಿಕ ಕಚೇರಿ ಆಶ್ರಯದಲ್ಲಿ, ಬಳ್ಳಾರಿ ಉಪ-ಪ್ರಾದೇಶಿಕ ಕಚೇರಿಯ ಆತಿಥ್ಯದಲ್ಲಿ ನಗರದ ವೀರಶೈವ ಪದವಿ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ಎರಡು ದಿನಗಳ ಕಾಲ ಕ್ರಿಕೆಟ್ ಹಾಗೂ ಬ್ಯಾಡ್ಮಿಂಟನ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕ್ರೀಡಾಕೂಟದಲ್ಲಿ ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಹಾಗೂ ಬೆಳಗಾವಿ ಕಚೇರಿಗಳ ಒಟ್ಟು ನಾಲ್ಕು ತಂಡಗಳು ಭಾಗವಹಿಸಿ ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು. ರೋಚಕವಾಗಿ ನಡೆದ ಅಂತಿಮ ಪಂದ್ಯಗಳಲ್ಲಿ ಬಳ್ಳಾರಿ ತಂಡವು ಕ್ರಿಕೆಟ್‌ನಲ್ಲಿ ಜಯಭೇರಿ ಬಾರಿಸಿದರೆ, ಬ್ಯಾಡ್ಮಿಂಟನ್‌ನಲ್ಲಿ ಹುಬ್ಬಳ್ಳಿ ತಂಡ ಗೆಲುವಿನ ನಗೆ ಬೀರಿತು.
ಸಮಾರಂಭದಲ್ಲಿ ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕ ಮಹದೇವಪ್ಪ, ಕಲಬುರಗಿ ಉಪ-ಪ್ರಾದೇಶಿಕ ಕಚೇರಿಯ ಪ್ರಭಾರ ಸಹಾಯಕ ನಿರ್ದೇಶಕಿ ಜಾಧವ್ ಸುಜಾತಾ ತಾನಾಜಿ, ಬಳ್ಳಾರಿ ಉಪ-ಪ್ರಾದೇಶಿಕ ಕಚೇರಿಯ ಪ್ರಭಾರ ಸಹಾಯಕ ನಿರ್ದೇಶಕ ಪಾಟೀಲ್ ಸಮೀರ್ ವಸಂತ್ ಹಾಗೂ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಕ್ರೀಡಾಕೂಟಕ್ಕೆ ಅಗತ್ಯ ಮೈದಾನ ಹಾಗೂ ಮೂಲಸೌಕರ್ಯ ಕಲ್ಪಿಸಿ ಸಹಕರಿಸಿದ ವೀರಶೈವ ಸಂಘದ ಅಧ್ಯಕ್ಷ ಡಾ. ಕೆ.ಎಸ್. ಮಹಾಂತೇಶ್ ಹಾಗೂ ಕಾರ್ಯದರ್ಶಿ ಡಾ. ಅರವಿಂದ್ ಪಾಟೀಲ್ ಅವರಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು. ಪಂದ್ಯಾವಳಿಯ ಅಚ್ಚುಕಟ್ಟು ಆಯೋಜನೆ ಹಾಗೂ ಆತಿಥ್ಯಕ್ಕೆ ಅಧಿಕಾರಿಗಳು ಮತ್ತು ಕ್ರೀಡಾಪಟುಗಳು ಮೆಚ್ಚುಗೆ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ