ಚಿಕ್ಕಮಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಘಟನೆ ಚಿಕ್ಕಮಗಳೂರು ನಗರದ ಎಂ.ಇ.ಎಸ್ ಕಾಲೇಜಿನಲ್ಲಿ ನಡೆದಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ ಗಮ್ ಟೇಪ್ ಅಂಟಿಸಿ, ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಲಾಗಿದೆ. ಆವರಣದಲ್ಲಿ ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಟೇಪ್ ಅಂಟಿಸಿ ಬಳಿಕ ಒಳಗೆ ಕಳುಹಿಸಿರುವ ಘಟನೆ ವರದಿಯಾಗಿದೆ. ಸಿಇಟಿ ಪರೀಕ್ಷೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ಕೆಇಎ ಈಗಾಗಲೇ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಸಿಸಿಟಿವಿ ಕ್ಯಾಮರಾ ಹಾಗೂ ಮುಖ ಚಹರೆ ಪತ್ತೆ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಜಾರಿಗೆ ತಂದಿದೆ.