LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಪ್ಪನ `ಸುಫಾರಿ’ ಆರೋಪಕ್ಕೆ ಟಾಂಗ್ ನೀಡಿದ ಚೈತ್ರಾ ಕುಂದಾಪುರ

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ ಆದ ಮೇಲೆ ಸ್ವಂತ ತಂದೆಯೇ ಅವರ ವಿರುದ್ಧ ತಿರುಗಿ ಬಿದ್ದಿದ್ದು ಸಾಲು ಸಾಲು ಆರೋಪ ಮಾಡಿದ್ದಾರೆ. ಇದೀಗ ಠಾಣಾ ಮೆಟ್ಟಿಲು ಕೂಡಾ ಹತ್ತಿದ್ದಾರೆ.

ಇಷ್ಟು ದಿನ ಕೌಟುಂಬಿಕ ಜಗಳ ಬರೀ ಬಾಯಿ ಮಾತಿನಲ್ಲೇ ಇತ್ತು. ಆದರೆ ಇದೀಗ ಚೈತ್ರಾ ಕುಂದಾಪುರ ನನಗೆ ಜೀವ ಬೆದರಿಕೆ ಹಾಕಿದ್ದಾಳೆ ಎಂದು ತಂದೆ ಬಾಲಕೃಷ್ಣ ನಾಯ್ಕ್ ಅವರು ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕೌತುಕವನ್ನು ಸೃಷ್ಟಿ ಮಾಡಿದೆ.

ಚೈತ್ರಾ ಕುಂದಾಪುರ ನೇರವಾಗಿ ನನ್ನ ಜೀವ ತೆಗೆಯಲು ಸುಪಾರಿ ನೀಡಿದ್ದಾರೆ. ನನ್ನ ಆಸ್ತಿ ಹಾಗೂ ಭೂಮಿಗಾಗಿ ನನ್ನನ್ನ ಬಲಿ ಪಡೆಯಬಹುದು. ಭೂಗತ ದೊರೆಗಳ ಮೂಲಕ ಜೀವ ತೆಗೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆಸ್ತಿಗಾಗಿ ಹೇಯ ಕೃತ್ಯವನ್ನು ಮಾಡಬಹುದು ಎಂದು ಆರೋಪಿಸಿದ್ದಾರೆ.

ತಂದೆಯ ಈ ಆರೋಪಕ್ಕೆ ಈಗ ಚೈತ್ರಾ ಕುಂದಾಪುರ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಟಾಂಗ್ ಕೊಟ್ಟಿದ್ದಾರೆ. ಸುಪಾರಿ ಆರೋಪಕ್ಕೆ ಅಡಿಕೆ ಹಿಡಿದು ಚೈತ್ರಾ ಕುಂದಾಪುರ ಅವರು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿರುವ ಅವರು ಹೀಗೆ ತೋಟದಲ್ಲಿ ಓಡಾಡುವಾಗ ಒಂದು ಅಡಿಕೆ ಸಿಕ್ಕಿತು. ಇದಕ್ಕೆ ಹಿಂದಿಯಲ್ಲಿ ‘ಸುಪಾರಿ’ ಅಂತಾರೆ. ತುಳುವಿನಲ್ಲಿ ಏನಂತಾರೆ?? ಎಂದು ಪ್ರಶ್ನಿಸಿದ್ದಾರೆ. ಪೋಸ್ಟ್ ನೋಡಿದ ನೆಟ್ಟಿಗರು ಅನೇಕ ರೀತಿಯಲ್ಲಿ ಕಾಮೆಂಟ್ಸ್ ಹಾಕಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026