LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ

ಕುಂದಾಪುರ : ಇತ್ತೀಚೆಗೆ ವಿವಾಹಿತರಾಗಿರುವ ಬಿಗ್‌ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಗಂಭೀರ ಅರೋಪಗಳನ್ನು ಮಾಡಿದ್ದು, ತನ್ನನ್ನು ಮದುವೆಗೆ ಕರೆದೇ ಇಲ್ಲ ಎಂದು ತಂದೆ ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ. ಚೈತ್ರಾ ಕುಂದಾಪುರ ಕೆಲದಿನಗಳ ಹಿಂದೆ ದೇವಸ್ಥಾನದಲ್ಲಿ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಎಂಬ ಯುವಕನನ್ನು ವರಿಸಿದ್ದಾರೆ.

ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ ಎಂದು ಬಾಲಕೃಷ್ಣ ನಾಯ್ಕ್‌ ಹೇಳಿದ್ದಾರೆ.



ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನನ್ನು ಮನೆಯಲ್ಲಿ ಬಿಟ್ಟು ಅಮ್ಮ-ಮಗಳು ಬೀಗ ಹಾಕಿ ಹೋಗಿದ್ದರು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಚೈತ್ರಾಗೆ ಯಾರೂ ದೊಡ್ಡ ಸ್ಥಾನಮಾನ ಕೊಡುವ ಅಗತ್ಯವಿಲ್ಲ. ತಂದೆಯನ್ನೇ ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಎಷ್ಟು ಸರಿ? ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಅದು ಹೆಮ್ಮೆಯ ವಿಷಯ ಆಗುತ್ತಿತ್ತು. ಮೋಸದ ಹಣದಲ್ಲಿ ಆಕೆ ಕೊಟ್ಟು ಪ್ರಯೋಜನ ಏನು ಎಂದು ಬಾಲಕೃಷ್ಣ ಹೇಳಿದ್ದಾರೆ.

ಮಗಳ ಮದುವೆಯನ್ನು ನಾನು ಒಪ್ಪುವುದಿಲ್ಲ. ನನಗೆ ಸರಿಯಾಗಿ ಆಮಂತ್ರಣ ಕೂಡ ನೀಡಿಲ್ಲ. ಮದುವೆ ಸಂದರ್ಭ ಆಕೆ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್​ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರ ಪತಿ ನಮ್ಮ ಮನೆಯಲ್ಲಿ ಇದ್ದವನು. ಅವನು ಕೂಡ ಕಳ್ಳ. ಅವರಿಗೆ ಮಾನ ಮರ್ಯಾದೆ ಇಲ್ಲ. ಈಗ ನನ್ನ ಕುಟುಂಬದ ಮಾನ ಮರ್ಯಾದೆ ಕೂಡ ತೆಗೆದರು ಎಂದು ಬೇಸರ ಹೊರಹಾಕಿದ್ದಾರೆ.

ಆಕೆ ನನ್ನ ಜೀವನದಲ್ಲಿ ಬರಲೇಬಾರದು. ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ ಎಂಬುದು ಅವರ ಪ್ರಶ್ನೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಹೈಕೋರ್ಟ್9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!