ಚಾಮರಾಜನಗರ : ಅನೈತಿಕ ಸಂಬಂಧಕ್ಕೆ ಹಿನ್ನೆಲೆಯಲ್ಲಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಕೊಕ್ಕನಹಳ್ಳಿ ಎಲ್ಲಿ ಮಹೇಶ್ (26) ಎನ್ನುವ ಯುವಕನನ್ನು ಕುಮಾರಸ್ವಾಮಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ತಾಯಿಯ ಜೊತೆಗೆ ಮಹೇಶ್‌ಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ.
ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನುವ ಅನುಮಾನದಲ್ಲಿ ಮಹೇಶನನ್ನ ಕುಮಾರಸ್ವಾಮಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಎಸ್ಪಿ, ಎಎಸ್ಪಿ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೇ ನಡೆಸುತ್ತಿದ್ದು ರಾಮಸಮುದ್ರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.