LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚನ್ನಪಟ್ಟಣ ಉಪಚುನಾವಣೆ,ರಾಜ್ಯ ಬಿಜೆಪಿ ಕಚೇರಿಯ್ಲಲಿ ಸಮನ್ವಯ ಸಭೆ

ಬೆಂಗಳೂರು : ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಚನ್ನಪಟ್ಟಣ ಕ್ಷೇತ್ರದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.


ಸಮನ್ವಯ ಸಭೆ ಮುಗಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು ಚನ್ನಪಟ್ಟಣ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ನಿನ್ನೆದಿನ (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದೇನೆ.ಮೈತ್ರಿ ಪಕ್ಷದ ನಾಯಕರು ಕೂತು ಚರ್ಚೆ ಮಾಡಿ ತೆಗೆದುಕೊಂಡ ನಿರ್ಧಾರದಿಂದ ನಾನು ಚನ್ನಪಟ್ಟಣ ಕ್ಷೇತ್ರದ NDA ಅಭ್ಯರ್ಥಿ ಆಗಿದ್ದೇನೆ ಎಂದು ತಿಳಿಸಿದರು.


ನಾನು ಉಪಚುನಾವಣೆಗೆ ಸಿದ್ದನಾಗಿರಲಿಲ್ಲ. ಆದರೆ ಬದಲಾದ ರಾಜಕಾರಣ ನನ್ನನ್ನ ಎನ್ ಡಿ ಎ ಅಭ್ಯರ್ಥಿಯನ್ನಾಗಿ ಮಾಡಿದೆ. ಬಿಜೆಪಿ ಸ್ಥಳೀಯ ಮುಖಂಡರು ಇಂದಿನ ಸಭೆಯಲ್ಲಿ ನಮ್ಮ ಗೆಲುವಿಗೆ ಶ್ರಮ ಪಡೋದಾಗಿ ಮಾತುಕೊಟ್ಟಿದ್ದಾರೆ ಎಂದು ತಿಳಿಸಿದರು.


ಒಟ್ಟಾರೆಯಾಗಿ ಶಿಗ್ಗಾವಿ, ಸಂಡೂರು, ಮತ್ತು ಚನ್ನಪಟ್ಟಣ ಮುರು ಕ್ಷೇತ್ರಗಲ್ಲೂ ಎನ್ ಡಿ ಎ ಅಭ್ಯರ್ಥಿ ಗಳ ಗೆಲುವಿಗೆ ಶ್ರಮವಹಿಸುತ್ತೇವೆ ಎಂದರು.


ಈ ಸಂದರ್ಭದಲ್ಲಿ ರಾಜ್ಯಸಭೆ ಸದಸ್ಯರಾದ ಲೆಹರ್ ಸಿಂಗ್ ಅವರು , ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ರುದ್ರೇಶ್ ಅವರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅ.ದೇವೇಗೌಡರು ಸೇರಿದಂತೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಮೈತ್ರಿಕೂಟದ ಎಲ್ಲ ನಾಯಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶ