Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಾತುವರ್ಣ ವ್ಯವಸ್ಥೆ ಮಹಿಳೆ ಮತ್ತು ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

*ಡಾ.ಫ.ಗು.ಹಳಕಟ್ಟಿ ಫೌಂಡೇಶನ್ ಅತ್ಯಂತ ಸಮರ್ಥರನ್ನು ಆರಿಸಿ ಪ್ರಶಸ್ತಿ ನೀಡಿದೆ*

 

*ವಚನ ಸಾಹಿತ್ಯ-ದಾಸ ಸಾಹಿತ್ಯ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿವೆ*

 

ಚಾತುವರ್ಣ ವ್ಯವಸ್ಥೆ ಮಹಿಳೆ ಮತ್ತು ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು 2: ಚಾತುವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು‌ ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು ಮತ್ತು ಬಸವಣ್ಣನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಟೌನ್ ಹಾಲ್ ನಲ್ಲಿ ಫ.ಗು.ಹಳಕಟ್ಟಿ ಫೌಂಡೇಶನ್ ಹಮ್ಮಿಕೊಂಡಿದ್ದ ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅವರು ಉದ್ಘಾಟಿಸಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಅತ್ಯಂತ ಕೆಳ ಜಾತಿಯಲ್ಲಿ ಜನಿಸಿ ಅತ್ಯುನ್ನತ ಎತ್ತರಕ್ಕೆ ಏರಿದ ಅಲ್ಲಮಪ್ರಭುರನ್ನು ಅನುಭವ ಮಂಟಪದ ಮುಖ್ಯಸ್ಥರನ್ನಾಗಿಸಿದ್ದರು. ಈ ಅನುಭವ ಮಂಟಪದ ಆಶಯವನ್ನು, ವಚನಗಳ ಮಹತ್ವವನ್ನು ಮುಂದಿನ ತಲೆಮಾರುಗಳಿಗೆ ದಾಟಿಸಿದವರಲ್ಲಿ ಫ.ಗು.ಹಳಕಟ್ಟಿಯವರು ಪ್ರಮುಖರು ಎಂದರು.

ಹುಟ್ಟುವಾಗ ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ" ಎನ್ನುವ ಕುವೆಂಪು ಅವರ ಮಾತನ್ನು ಪ್ರಸ್ತಾಪಿಸಿ ವಿದ್ಯಾವಂತರೂ ಮೌಡ್ಯ ಮತ್ತು ಜಾತಿಯ ವ್ಯಸನಿಗಳಾಗಿದ್ದಾರೆ ಎಂದು ತಿಳಿಸಿದರು.

ಚಾತುವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ, ಸಂಪತ್ತಿನಿಂದ ಶೂದ್ರ ಸಮುದಾಯ ವಂಚಿತವಾಗಿತ್ತು. ಅದಕ್ಕೇ ಕಾಯಕ ಮತ್ತು ದಾಸೋಹ ಸಂಸ್ಕಾರದ ಮೂಲಕ ಸರ್ವರಿಗೂ ಶಿಕ್ಷಣ ಮತ್ತು ಅವಕಾಶಗಳಲ್ಲಿ ಸಮಪಾಲು ಸಿಗುವಂತೆ ಮಾಡಿದ್ದು ಬಸವಣ್ಣನವರು. ನಾನು ಮೊದಲ ಬಾರಿ ಮತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಇದೇ ಕಾಯಕ ಮತ್ತು ದಾಸೋಹ ಸಂಸ್ಕೃತಿಯನ್ನು ಪಾಲಿಸುತ್ತಿದ್ದೇನೆ ಎಂದರು.

ಪ್ರಶಸ್ತಿ ಪುರಸ್ಕೃತರಾದ ವಚನ ಕ್ಷೇತ್ರದಲ್ಲಿ ಮಹತ್ವದ ಮೌಲ್ಯಯುತ ಸಾಹಿತ್ಯಿಕ ಕೆಲಸ ಮಾಡಿರುವ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ, ಸಮಾಜ ಸೇವಕಿ ಶ್ರೀಮತಿ ಎಸ್.ಜಿ.ಸುಶೀಲಮ್ಮ ಅವರನ್ನು ಸನ್ಮಾನಿಸಲಾಯಿತು.

ಬೇಲಿಮಠದ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಹಿಸಿದ್ದರು. ಶ್ರೀಮತಿ ಶೀಲಾ ಹಳಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪವಿತ್ರ ಹಳಕಟ್ಟಿ ಸೇರಿ ಹಲವು ಗಣ್ಯರು ವೇದಿಕೆಯಲ್ಲಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ