ಮೈಸೂರು: ಟಿ ನರಸೀಪುರದಲ್ಲಿ ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿದ ಆರೋಪ ಬೆಳಕಿಗೆ ಬಂದಿದೆ.
ಯುವತಿಯೊಬ್ಬಳು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮದನ್ ರಾಜ್ ತನ್ನನ್ನು ಬಲವಂತವಾಗಿ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ್ದು, ಇಬ್ಬರ ಫೋಟೋಗಳಿದ್ದ ಮೊಬೈಲ್‌ಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ. ಮದುವೆ ವಿಚಾರವಾಗಿ ಕೇಳಿದಾಗ ಇಬ್ಬರೂ ವಿಷ ಸೇವಿಸೋಣ ಎಂದು ಹೇಳಿ, ತನ್ನಿಗೆ ಮಾತ್ರ ವಿಷ ನೀಡಿ ಕೊಲೆ ಯತ್ನ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಜೊತೆಗೆ ಈಗ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಲು ಶೋಧ ನಡೆಸುತ್ತಿದ್ದಾರೆ.