LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಜ್ಯೋತಿ ಯೋಜನೆ; ಶೇ.100 ರಷ್ಟು ಪ್ರಗತಿ ಸಾಧಿಸಿ: ಚಿದಾನಂದಪ್ಪ

ಬಳ್ಳಾರಿ,ನ.22

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ಅರ್ಹ ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವAತೆ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು.
ಇಂಧನ ಇಲಾಖೆಯ ಗೃಹಜ್ಯೋತಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ನಗರದ ಬುಡಾ ಕಾಂಪ್ಲೆಕ್ಸ್ ಹಿಂಭಾಗದ ಜೆಸ್ಕಾಂ ವಲಯ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು ಅರ್ಹ 3,02,892 ಗ್ರಾಹಕರುಗಳಲ್ಲಿ ಇಲ್ಲಿಯವರೆಗೆ 2,80,282 ಗ್ರಾಹಕರುಗಳು ಗೃಹಜ್ಯೋತಿಗೆ ನೋಂದಣಿಯಾಗಿದ್ದಾರೆ. ಬಹುಸ್ಥಾವರಗಳು, ಖಾಲಿ ಮನೆಗಳು, ವಲಸೆ ಕಾರ್ಮಿಕರ ಸ್ಥಾವರಗಳು 12,410 ಗಳನ್ನು ಹೊರತುಪಡಿಸಿ ಶೇ.96 ನೋಂದಣಿಯಾಗಿರುವುದು ತೃಪ್ತಿಕರ ವಿಷಯವಾಗಿದ್ದು, ಮುಖ್ಯಮಂತ್ರಿಯವರ ಆಶಯದಂತೆ ಜಿಲ್ಲೆಯಲ್ಲಿ ಶೇ.100 ರಷ್ಟು ನೋಂದಣಿಗೆ ಎಲ್ಲ್ಲರೂ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಅರ್ಹತೆಯಿದ್ದು ನೋಂದಣಿ ಮಾಡಿಕೊಳ್ಳದ 10,200 ಗ್ರಾಹಕರುಗಳು ತಕ್ಷಣವೇ ತಮ್ಮ ಆಧಾರ್‌ಕಾರ್ಡ್ ಮತ್ತು ವಿದ್ಯುತ್ ಬಿಲ್‌ನೊಂದಿಗೆ ಹತ್ತಿರದ ಜೆಸ್ಕಾಂ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಬೇಕು ಎಂದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬಡವರ ಪರವಾಗಿದ್ದು, ಇದÀರ ಪ್ರಯೋಜನ ಪಡೆದುಕೊಳ್ಳುವಂತೆ ಸಾರ್ವಜನಿಕರನ್ನು ಉತ್ತೇಜಿಸಬೇಕು, ಯೋಜನೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರಿಸರ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆಗೆ ಸೋಲಾರ್ ಅಳವಡಿಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಸೂಚಿಸಿದರು.
ಸಭೆಯಲ್ಲಿ ಜೆಸ್ಕಾಂ ಬಳ್ಳಾರಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಂಗನಾಥ ಬಾಬು.ಜೆ., ಲೆಕ್ಕಾಧಿಕಾರಿ ಸುಕುಮಾರ್ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರುಗಳಾದ ಎನ್.ಕರಿಬಸಪ್ಪ, ಸಂಗನಕಲ್ಲು ವಿಜಯ್ ಕುಮಾರ್, ಆರ್.ಎಸ್ ಚಾಂದ್‌ಬಾಷ, ತಾಲ್ಲೂಕು ಅಧ್ಯಕ್ಷರಾದ ಮಾರುತಿ ಪ್ರಸಾದ್ ರೆಡ್ಡಿ, ಶ್ರೀನಿವಾಸಲು ರಾವ್, ಗೋನಾಳ್ ನಾಗಭೂಷಣ ಗೌಡ ಮತ್ತು ಸದಸ್ಯರಾದ ಮಲ್ಲಿಕಾರ್ಜುನ, ಶೇಕರ್, ತಾಯಣ್ಣ, ಶಿವರಾಜ, ತಿಪ್ಪೇರುದ್ರ, ಯಾಳ್ಪಿ ಮೇಟಿ ದಿವಾಕರ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು