Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ನಾನು ಓಡಿ ಹೋಗುವ ಸಿಎಂ ಅಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಹಾವೇರಿ (ಶಿಗ್ಗಾವಿ),ಏ.19: ನನ್ನನ್ನು ಬೆಳಸಿದವರು ನೀವು. ನನ್ನನ್ನು ಉಳಿಸಿಕೊಳ್ಳುವವರು ನೀವು. ನಾನು ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆಯನ್ನು ಮಾಡುತ್ತೇನೆ. ನನ್ನ ಸಾವಾದರೆ, ನನ್ನನ್ನು ಶಿಗ್ಗಾವಿಯಲ್ಲೇ ಮಣ್ಣು ಮಾಡಬೇಕು. ಇದು ನನ್ನ ಶಿಗ್ಗಾವಿಯ ಭೂಮಿ ತಾಯಿಯ ಮಣ್ಣಿನ ಋಣ ತೀರಿಸುವಂತದ್ದಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮುನ್ನ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಅದ್ಯಾವ ಜನ್ಮದ ಸಂಬಂಧವೊ ಯಾವ ಋಣಾನುಬಂಧವೊ ನೀವು ಹದಿನೈದು ವರ್ಷ ಸತತ ಬೆಂಬಲ ನೀಡಿದ್ದೀರಿ, ನಮ್ಮ ನಿಮ್ಮ ನಡುವೆ ಯಾವುದೇ ಶಕ್ತಿ ಅಡ್ಡಿ ಬರುವುದಿಲ್ಲ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ತಲೆ ಬಾಗಿ, ನನ್ನ ಕೊನೆ ಉಸಿರು ಇರುವ ತನಕ ನಿಮ್ಮ ಸೇವೆ ಮಾಡುತ್ತೇನೆ ಎಂಬ ಪ್ರತಿಜ್ಞೆ ಮಾಡುತ್ತೇನೆ ಎಂದರು.

ಶಿಗ್ಗಾವಿ-ಸವಣೂರಿನ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿತ್ತು. 2008ರಲ್ಲಿ ನಾನು ಬಂದಾಗ ಒಳ್ಳೆಯ ರಸ್ತೆ ಇರಲಿಲ್ಲ, ರಸ್ತೆಯ ಮಧ್ಯೆ ಹಳ್ಳಗಳಿದ್ದವು. ಕುಡಿಯಲು ನೀರಿರಲಿಲ್ಲ. ಕುಡಿಯುವ ನೀರಿಗಾಗಿ ನಮ್ಮ ತಾಯಂದಿರು ರಸ್ತೆಯಲ್ಲಿ ಕೊಡ ಹಿಡಿದುಕೊಂಡು ಸಾಲು ಹಿಡಿದು ನಿಲ್ಲುತ್ತಿದ್ದರು. ಒಂದು ಒಳ್ಳೆಯ ಆಫೀಸ್ ನ ಕಟ್ಟಡ ಇರಲಿಲ್ಲ. ಜನರ ಕಷ್ಟಕ್ಕೆ ಸ್ಪಂದನೆ ಇರಲಿಲ್ಲ. ಕೆರೆಗಳಿಗೆ ನೀರು ಇರಲಿಲ್ಲ. ಇದರ ಮಧ್ಯೆ ಪ್ರಾರಂಭವಾಗಿರುವ ನಮ್ಮ ಅಭಿವೃದ್ಧಿ ಪಯಣ ಇವತ್ತು ಎರಡು ಏತ ನೀರಾವರಿ ಮಾಡಿ 100ಕ್ಕಿಂತ ಹೆಚ್ಚು ಕೆರೆಗಳನ್ನು ತುಂಬಿಸಿರುವ ದಾಖಲೆ ಶಿಗ್ಗಾವಿ-ಸವಣೂರನಲ್ಲಿ ಆಗಿದೆ ಎಂದರು.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಳ್ಳಿಯಿಂದ ಹೊಲಗಳಿಗೆ ಹೋಗುವ 2 ಸಾವಿರ ಕಿ.ಮೀ ಗ್ರಾಮೀಣ ರಸ್ತೆ ನಿರ್ಮಾಣ ಮಾಡಿದ್ದೇವೆ. 15 ವರ್ಷಗಳಲ್ಲಿ ಮಾರು 10 ಸಾವಿರ ಬಡವರಿಗೆ ಮನೆ ನಿರ್ಮಾಣ ಮಾಡಿದ್ದೆವೆ. ಮಳೆಯಿಂದ ಹಾನಿಗೊಳಗಾದ ಜನರಿಗೆ 12 ಸಾವಿರ ಮನೆಗಳನ್ನು ಕಟ್ಟಿರುವ ದಾಖಲೆಯನ್ನು ಮಾಡಿದ್ದೇವೆ. ಬಡತನ ಶಾಪವಲ್ಲ. ಹುಟ್ಟುವಾಗ ಬಡತನ ಇರಬಹುದು. ಆದರೆ ಸಾಯುವವರೆಗೂ ಬಡತನದಲ್ಲಿಯೇ ಇರಬೇಕೆಂದು ಇಲ್ಲ. ತಮ್ಮ ದುಡಿಮೆಯಿಂದ ಪ್ರಾಮಾಣಿಕವಾಗಿ ಮುಂದೆ ಬರುವ ಅವಕಾಶವನ್ನು ಮಾಡಿಕೊಟ್ಟಿದ್ದೇನೆ. ಆದ್ದರಿಂದ ಜನರು ಸ್ವಾಭಿಮಾನದ ಬದುಕಿನಿಂದ ಬಾಳುತ್ತಿದ್ದಾರೆ ಎಂದರು.

ಶಿಗ್ಗಾವಿ, ಸವಣೂರು, ಬಂಕಾಪುರದಲ್ಲಿ 6 ಸಾವಿರ ಮನೆ ನಿರ್ಮಾಣ ಮಾಡಿದ್ದೇವೆ. ನಗರಗಳ ಸಂಪೂರ್ಣ ಅಭಿವೃದ್ಧಿಯನ್ನು ಮಾಡಿದ್ದೇವೆ. ಪ್ರತಿಯೊಂದು ಗ್ರಾಮಕ್ಕೆ ಇನ್ನು ಆರು ತಿಂಗಳಲ್ಲಿ ಪ್ರತಿಯೊಂದು ಮನೆಗೆ ನಳದಿಂದ ನೀರು ಕೊಡುವಂತಹ ವ್ಯವಸ್ಥೆ ನಮ್ಮ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಆಗುತ್ತಿದೆ. ನಮ್ಮ ಪ್ರಧಾನಿ ಮೋದಿ, ನಡ್ಡಾ ಅವರ ನೇತೃತ್ವದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಹಳ್ಳಿ ಹಳ್ಳಿಯ ಪ್ರತಿ ಮನೆಗೂ ನಲ್ಲಿ ನೀರು ಕೊಡಲಾಗುತ್ತಿದೆ ಎಂದರು.

ಜೆ.ಪಿ ನಡ್ಡಾ ಅವರ ನೇತೃತ್ವದಲ್ಲಿ ಪಕ್ಷ ಕರ್ನಾಟಕದಲ್ಲಿ ಅತ್ಯಂತ ಸಂಘಟಿತವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ 125 ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದು, ಮತ್ತೊಮ್ಮೆ ಕನ್ನಡ ನಾಡಿನ ಸೇವೆಯನ್ನು ಮಾಡಲು ಬಾರತೀಯ ಜನತಾ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ. ಮುಖ್ಯಮಂತ್ರಿಯಾಗಿ ನಾನು ರೈತರಿಗೆ, ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ವಿದ್ಯಾರ್ಥಿಗಳಿಗೆ ಏನೆಲ್ಲ ಕೆಲಸ ಮಾಡಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆಯನ್ನು ಮಾಡುತ್ತೇನೆ ಎಂದರು.

ನಾನು ಕ್ಷೇತ್ರ ಬಿಟ್ಟು ಬೇರೆ ಕಡೆ ಹೋಗುತ್ತೇನೆ ಎಂದು ಕೇಳಿದರು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ಏನೇ ಆದರೂ ನನ್ನ ಜನರ ಮುಂದೆ ತೀರ್ಮಾನ ಆಗಬೇಕು. ನೀವೇ ನನ್ನ ಮಾಲೀಕರು, ನಾನು ಕ್ಷೇತ್ರ ಬಿಟ್ಟು ದಾವಣಗೆರೆಗೆ ಹೋಗುತ್ತೆನೆ. ಎಂದು ಹಬ್ಬಿಸಿದ್ದರು. ಯಾವ ನನ್ನ ಮಗ ಹೇಳಿದ್ದು ಎಂದು ಕೇಳಿದೆ. ಇದು ನನ್ನ ಆತ್ಮಸ್ಥೈರ್ಯ. ಕರ್ನಾಟಕ ಮಾತೆಗೆ, ಕನ್ನಡಿಗರಿಗೆ ಮತ್ತು ಈ ಕ್ಷೇತ್ರದ ಜನರಿಗೆ ನಾನು ಪ್ರಾಮಾಣಿಕ ಸೇವೆಯನ್ನು ಮಾಡಿದ್ದೇನೆ. ಅದರಲ್ಲಿ ನನ್ನ ನಂಬಿಕೆಯಿದೆ ಎಂದರು.

ಕ್ಷೇತ್ರದಲ್ಲಿ ಆರ್ಯುವೇದಿಕ ಆಸ್ಪತ್ರೆ, ಶಿಗ್ಗಾವಿ, ಸವಣೂರಿನಲ್ಲಿ 250 ಹಾಸಿಗೆಯ ಆಸ್ಪತ್ರೆ, ಜಿಟಿಟಿಸಿ ಮತ್ತು ಇಂಜಿನಿಯರಿಂಗ್ ಕಾಲೇಜು, 10 ಸಾವಿರ ಜನರಿಗೆ ಉದ್ಯೋಗ ಕೊಡುವ ಟೆಕ್ಸ್ಟೈಲ್ ಪಾರ್ಕ್ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಮಾಡಿದ್ದೇನೆ. ಬಂಕಾಪುರ ತಾಲ್ಲೂಕು ಆಗಬೇಕೆಂದು ಜನರ ಬೇಡಿಕೆ ಇದೆ. ನಾನು ಇವತ್ತು ಅದಕ್ಕೆ ಎಲ್ಲ ಅನುಮತಿ ಕೊಟ್ಟು ಆಜ್ಞೆ ಮಾಡಿದ್ದೇನೆ. ಚುನಾವಣೆ ನೀತಿ ಸಂಹಿತೆ ಅದಕ್ಕೆ ಅಡಚಣೆಯಾಗಿದೆ. ಬರುವ ದಿನಗಳಲ್ಲಿ ಬಂಕಾಪುರವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡ, ಹಿರಿಯ ನಾಯಕರಾದ ಗೋವಿಂದ ಕಾರಜೋಳ, ಸಿ.ಸಿ ಪಾಟೀಲ, ಮುರುಗೇಶ ನಿರಾಣಿ, ಬಿ.ಸಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ