Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಭಿನ್ನಮತ ಶೀಘ್ರ ಶಮನ ಆಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 

ಸುದ್ದಿಮೂಲ ವಾರ್ತೆ

ಮಂಗಳೂರು, ಏ.13: ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿದ್ದು, ಭಿನ್ನಮತ ಶಮನವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರ ಉಳಿದಿದೆ. ಕೆಲವೆಡೆ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ ಎಂದರು.

ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ, ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ. ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದರು.

ಹಿರಿಯರ ಜತೆ ನಾನು ಹಾಗೂ ಹೈಕಮಾಂಡ್ ಮಾತಾಡುತ್ತಿದ್ದೇವೆ ಲಕ್ಷ್ಮಣ ಸವದಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದ ಅವರು ನೆಹರೂ ಓಲೇಕಾರ್ ಆರೋಪಗಳಲ್ಲಿ ಹುರುಳಿಲ್ಲ ಎಂದರು.

ಅಸಮಾಧಾನಿತರ ಜೊತೆ ಹೈಕಮಾಂಡ್ ಮಾತನಾಡುತ್ತಿದೆ.. ನಾನು ಎಲ್ಲಾ ನಾಯಕರ ಜೊತೆ ಮಾತನಾಡಿದ್ದೇನೆ. ಭಿನ್ನಮತ ಶೀಘ್ರವೇ ಬಗೆಹರಿಯುವ ವಿಶ್ವಾಸ ಇದೆ. ಸವದಿ ಹಿರಿಯರು, ಸುಧೀರ್ಘ ರಾಜಕೀಯದಲ್ಲಿದ್ದಾರೆ. ಸವದಿಗೆ ಜನರಿಂದಲೂ ಒತ್ತಡ ಇದೆ, ಸಮಯ ಬೇಕು. ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ ಹೇಳಿಕೆ ಬೇಡ, ದಾಖಲೆ ನೀಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ನವರಿಗೆ 60ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಈಗ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ