LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಕ್ರೀಡಾಕೂಟ -2025 ವ್ಯವಸ್ಥಿತ ನಿರ್ವಹಣೆಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು : ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕರ್ನಾಟಕ ಕ್ರೀಡಾಕೂಟ -2025   ವನ್ನು  ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು  ಮಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದ್ದು ಗೃಹ ಸಚಿವರು ಭಾಗಿಯಾಗಲಿದ್ದಾರೆ.

ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು  ಆಯೋಜಿಸುತ್ತಿದ್ದು  ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4500 ಜನರು ಭಾಗವಹಿಸಲಿದ್ದು ಊಟ -ತಿಂಡಿ,ವಸತಿ , ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

*ಕ್ರೀಡಾಕೂಟ ಲಾಂಛನ ಬಿಡುಗಡೆ* 

ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಿದರು.

ಕ್ರೀಡಾಕೂಟದ ಲೋಗೋದಲ್ಲಿನ  ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು,

ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು ಜತೆಗೆ ಸೋಲು- ಗೆಲುವು ಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವುದಾಗಿ ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಗೃಹಸಚಿವರಾದ ಡಾ ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳು