LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರು ಸ್ವತಂತ್ರ ಮುಕ್ತವಾಗಿ ಕಾರ್ಯ ನಿರ್ವಹಿಸಲು ಸಂಪೂರ್ಣ ಸಹಕಾರ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪೊಲೀಸರು ಸ್ವತಂತ್ರ ಮುಕ್ತವಾಗಿ ಕಾರ್ಯ ನಿರ್ವಹಿಸಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಕರ್ನಾಟಕ ರಾಜ್ಯ ಮಹಾನಿರ್ದೇಶಕರು ಮತ್ತು ಪೆÇಲೀಸ್ ಮಹಾ ನಿರೀಕ್ಷಕರ ಕಚೇರಿ ವತಿಯಿಂದ ಮೈಸೂರು ರಸ್ತೆ ಸಿ.ಎ.ಆರ್ ಕೇಂದ್ರಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಪೆÇಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೆÇಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿಗಳು ಜನರ ಪ್ರಾಣ, ಆಸ್ತಿ ರಕ್ಷಿಸುವ ಪೆÇಲೀಸ್ ಸಿಬ್ಬಂದಿಯ ಹಿತ ಕಾಪಾಡಲು ಸರ್ಕಾರ ಸರ್ಕಾರ ಸದಾ ಸಿದ್ದವಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೆÇಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ.

ಪೆÇಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೆÇಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ. ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೆÇಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೆÇಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ. ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅತೀಕ್ ಎಲ್.ಕೆ., ಗೃಹ ಕಾರ್ಯದರ್ಶಿ ಉಮಾಶಂಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಪೆÇಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST