LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

*ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಅಪರಾಧ*

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.

*ಹೈಕಮಾಂಡ್ ತೀರ್ಮಾನ ಅಂತಿಮ*

ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.

*ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ*

ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ