Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ : ಮುಖ್ಯಮಂತ್ರಿಗಳ ಸೂಚನೆ

 

ಬೆಂಗಳೂರು :
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು...ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

*ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ನಲ್ಲಿ ಫ್ಯಾಕ್ಟ್ ಚೆಕ್*

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ