ದಾವಣಗೆರೆ: ಮಕ್ಕಳ ಮೇಲೆ ದೌರ್ಜನ್ಯ ಆರೋಪ ಎದುರಿಸುತ್ತಿರುವ ವಚನಾನಂದ ಶ್ರೀಗೆ ವಿಶೇಷ ಜಿಲ್ಲಾ ನ್ಯಾಯಾಲಯದಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ಮೇಲಿನ ಹಿಂಸೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಏಪ್ರಿಲ್ 21ರಂದು ವಿಶೇಷ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತುಗಳೊಂದಿಗೆ ಜಾಮೀನು ನೀಡಿದ್ದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ಸ್ಥಳ ಬಿಟ್ಟು ಹೋಗಬಾರದು ಎಂದು ಸೂಚನೆ ನೀಡಿದೆ. ಹರಿಹರ ಮಠದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಮಕ್ಕಳ ಮೇಲೆ ಸ್ವಾಮೀಜಿ ಮತ್ತು ಅವರ ಬೆಂಬಲಿಗರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಮೂವರು ಮಕ್ಕಳು CWC ಮುಂದೆ ದೂರು ದಾಖಲಿಸಿದ್ದರು.