ಮಂಡ್ಯ: ಬಾಲಗರ್ಭಿಣಿಯರ ಸ್ಕ್ಯಾನಿಂಗ್ ಪ್ರಕರಣದಲ್ಲಿ ವೈದ್ಯರನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿರುವ ಜೆಡಿಎಸ್ ಶಾಸಕ (JDS MLA) ವಿವಾದಕ್ಕೆ ಕಾರಣರಾಗಿದ್ದಾರೆ.
ಕಳೆದ ಒಂದು ವಾರದ ಹಿಂದೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಬಾಲ ಗರ್ಭಿಣಿಯರನ್ನು ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಪೊಲೀಸರು ಮೂವರು ವೈದ್ಯರನ್ನು ಬಂಧಿಸಿದ್ದರು. ಇದೀಗ ಈ ಪ್ರಕರಣದ ಕುರಿತು ಜೆಡಿಎಸ್ ಶಾಸಕ ಹೆಚ್.ಡಿ. ಮಂಜು (H.D. Manju) ವೈದ್ಯರ ಪರವಾಗಿ ನಿಂತಿದ್ದಾರೆ. ವೈದ್ಯರು ಯಾವುದೇ ತಪ್ಪು ಮಾಡಿಲ್ಲ, ಅಲ್ಲಿ ಕೇವಲ ನಿರ್ಲಕ್ಷ್ಯ (ನೆಗ್ಲಿಜೆನ್ಸ್) ನಡೆದಿದೆ ಅಷ್ಟೆ. ಅದಕ್ಕಾಗಿ ಅವರನ್ನು ಬಂಧಿಸಿ ಜೈಲಿಗೆ ಹಾಕುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇಂತಹ ಕ್ರಮಗಳು ವೈದ್ಯರ ಮನೋಬಲ ಕುಗ್ಗಿಸುವಂತಾಗುತ್ತದೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.
ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಆದರೆ ವೈದ್ಯರನ್ನು ಬಂಧಿಸುವುದು ನ್ಯಾಯಸಮ್ಮತವಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಈ ರೀತಿಯ ಪ್ರಕರಣಗಳಲ್ಲಿ ವೈದ್ಯರು ಭಯದಿಂದ ಸೇವೆಯಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಹೆಚ್.ಡಿ. ಮಂಜು ಬಂಧಿತ ವೈದ್ಯರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.