LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡೋಕ್ಲಾಂನಲ್ಲಿ 22 ಗ್ರಾಮಗಳನ್ನು ನಿರ್ಮಾಣ ಮಾಡಿದ ಚೀನಾ !

ನವದೆಹಲಿ: ಭಾರತದ ವಿರುದ್ಧ ಯಾವಾಗ್ಲೂ ಕುತಂತ್ರಿ ಚೀನಾ ಕತ್ತಿಮಸಿಯುತ್ತಲೇ ಇರುತ್ತೆ. ಸುಮ್ಮನೆ ಇರಲಾರದೇ ಗಡಿಯಲ್ಲಿ ಭಾರತವನ್ನು ಕೆಣಕುತ್ತೆ. ಇತ್ತೀಚೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಚೀನಾ ವಿದೇಶಾಂಗ ಸಚಿವ ವಾಂಗ್ ಯಿಯನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದರು.ಆದರೆ, ಭೂತಾನ್ ಭಾಗ ಎನ್ನಲಾಗುವ ಪ್ರದೇಶದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಚೀನಾ 22 ಗ್ರಾಮಗಳನ್ನು ನಿರ್ಮಾಣ ಮಾಡಿದೆ. ಉಪಗ್ರಹ ಚಿತ್ರಗಳನ್ನು ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಭಾರತದ ಸಿಕ್ಕಿಂ ಸಮೀಪ ಈ ಗ್ರಾಮಗಳ ನಿರ್ಮಾಣವಾಗಿದ್ದು, ಕಳವಳ ವ್ಯಕ್ತವಾಗಿದೆ.

ಚೀನಾದ ಸೇನಾಪಡೆಗಳಿಗೆ ಸುಲಭ ಸಂಚಾರ
ಡೋಕ್ಲಾಂನಲ್ಲಿ ಗ್ರಾಮ ನಿರ್ಮಾಣವಾಗುತ್ತಿರುವುದರಿಂದ ಈ ಪ್ರಸ್ಥಭೂಮಿಯ ಅತ್ಯಂತ ದಕ್ಷಿಣಕ್ಕೆ ಚೀನಾದ ಸೇನಾಪಡೆಗಳು ಸಂಚಾರ ಮಾಡಲು ಅವಕಾಶ ದೊರೆಯುತ್ತದೆ. ಇದು ಭಾರತಕ್ಕೆ ತೀರ ಸಮೀಪವಾಗಿದ್ದು, ಇದು ಚೀನಾದ ಮಿಲಿಟರಿ ನೆಲೆಗಳಿಗೂ ಸಮೀಪದಲ್ಲಿದೆ.

ಡೋಕ್ಲಾಂ ಬಿಕ್ಕಟ್ಟು
2017ರಲ್ಲಿ ಡೋಕ್ಲಾಂನ ಈ ಪ್ರದೇಶವು ಭಾರತ ಮತ್ತು ಚೀನಾದ ಸೈನಿಕರ ನಡುವೆ 73 ದಿನಗಳ ಕಾಲದ ಬಿಕ್ಕಟ್ಟಿನ ಪ್ರದೇಶವಾಗಿತ್ತು. ಹೀಗಾಗಿ ಈ ಪ್ರಸ್ಥಭೂಮಿಯ ದಕ್ಷಿಣಕ್ಕೆ ಚೀನಾದ ಸೇನೆಗಳು ತಲುಪುವ ರಸ್ತೆ ಮಾರ್ಗಗಳ ನಿರ್ಮಾಣವನ್ನು ತಡೆಯಲು ಭಾರತ ಸರಕಾರ ಮಧ್ಯಪ್ರವೇಶಿಸಿತ್ತು.

ಇದೀಗ ಮತ್ತೆ ಡೋಕ್ಲಾಂನಲ್ಲಿ ಗ್ರಾಮಗಳ ನಿರ್ಮಾಣ ವೇಗ ಪಡೆಯುತ್ತಿದ್ದು ಉಪಗ್ರಹ ಚಿತ್ರಗಳು ಭಾರತದ ಆತಂಕಕ್ಕೆ ಕಾರಣವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ