LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ: ಯುವಜನರು ದುಶ್ಚಟಗಳಿಂದ ದೂರವಿರಿ -ಎಂ.ಕೆ. ತಾಜ್‍ಪೀರ್

 

ಚಿತ್ರದುರ್ಗ : ಯುವಜನರು ಎಲ್ಲ ಬಗೆಯ ದುಶ್ಚಟಗಳನ್ನು ತೊರೆದು, ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ವತಿಯಿಂದ ಶುಕ್ರವಾರ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದಾರೆ. ಇಂತಹ ದುಶ್ಚಟಗಳಿಂದ ಹೊರಬಂದು ಓದು, ಕ್ರೀಡೆ, ಕಲೆ, ಸಾಂಸ್ಕøತಿಕ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕು. ಸಿಗುವ ಅವಕಾಶಗಳನ್ನು ಬಳಸಿಕೊಂಡು ಭವಿಷ್ಯದಲ್ಲಿ ಉಜ್ವಲವಾಗಿ ಬೆಳೆಯಬೇಕು, ನಾಡಿಗೆ ಕೀರ್ತಿ ತರುವ ಕಾರ್ಯವನ್ನು ಯುವಜನರು ಮಾಡಬೇಕು ಎಂದರು.

ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಸುಹಾಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪುರಸ್ಕøತರಾದ ಡಿ.ಶ್ರೀಕುಮಾರ್, ಪ್ರತಾಪ್ ಜೋಗಿ, ಸಿ.ಎನ್.ವೆಂಕಟೇಶ್, ಲಕ್ಷ್ಮೀ, ಹಿರಿಯೂರು ಚಿತ್ತಪ್ಪ ಅವರನ್ನು ಸನ್ಮಾನಿಸಲಾಯಿತು.  ಸರ್ಕಾರಿ ವಿಜ್ಞಾನ ಕಾಲೇಜು ಉಪನ್ಯಾಸಕ ನಾಗರಾಜ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಅಂತ್ಯೋದಯ ಕಲ್ಚರಲ್ ಪೌಂಡೇಷನ್ ಅಧ್ಯಕ್ಷ ಡಿ.ಓ.ಮುರಾರ್ಜಿ ಸರ್ಕಾರಿ ವಿಜ್ಞಾನ ಕಾಲೇಜಿನ ಬೋದಕ ಮತ್ತು ಬೋದಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ