ಘಟಪ್ರಭಾ: ಕ್ರೈಸ್ಟ್ ಕಾನ್ವೆಂಟ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನ ಪ್ರತಿಭಾವಂತ ವಿದ್ಯಾರ್ಥಿನಿ ಸಲೋನಿ ಬಸವರಾಜ ಮೆತ್ರಿ ಅವರು 2026–27ನೇ ಸಾಲಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದ ಟೈಕ್ವಾಂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಲೋನಿ ಅವರ ಈ ಅದ್ಭುತ ಸಾಧನೆ ಕ್ರೈಸ್ಟ್ ಕಾನ್ವೆಂಟ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಘಟಪ್ರಭಾ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.
ಅದೇ ರೀತಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಇದೆ ಕ್ರೈಸ್ಟ್ ಕಾನ್ವೆಂಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾಧನಾ ಅ ಹಾಲುಕ್ಕಿ ಇವಳು ಕಂಚಿನ ಪದಕ ಗಳಿಸಿ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಛೇರ್ಮನ ಆರ್ ಡಬ್ಲು ಜೆ ಬೆಂಗಳೂರ, ಪ್ರಾಂಶುಪಾಲರಾದ ವೀಣಾ ಆರ್ ಬೆಂಗಳೂರ, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದಲ್ಲಿಯೂ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.