LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ - ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

 

ದಾವಣಗೆರೆ: ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ಶ್ರೀ ದುರ್ಗಾಂಭಿಕದೇವಿ ಜಾತ್ರೆ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದೇವತೆ ಶ್ರೀ ದುರ್ಗಾಂಭಿಕದೇವಿ ಜಾತ್ರೆಯು ನಡೆಯುವ ದಿನಗಳಂದು ದೇವಸ್ಥಾನದ ಸುತ್ತಮುತ್ತಲು ಸ್ವಚ್ಚತೆಯನ್ನು ಕಾಪಾಡಬೇಕು, ವಿದ್ಯುತ್ ಅಲಂಕಾರ ಇರುವುದರಿಂದ ವಿದ್ಯುತ್ ಅನ್ನು ನಿರಂತರವಾಗಿ ಪೂರೈಸಬೇಕು. ಅದರಲ್ಲಿಯೂ ರಾತ್ರಿ ವೇಳೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಬೇಕು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಂಗಡಿಗಳನ್ನು ತೆರೆಯಬೇಕು ಎಂದು ಸೂಚನೆ ನೀಡಿದರು.

ನಗರದೇವತೆ ಶ್ರೀದುರ್ಗಾಂಭಿಕದೇವಿ ಜಾತ್ರೆಗೆ ಪ್ರತಿದಿನ ಅಂದಾಜು 2 ಲಕ್ಷ ಜನ ಬರುವ ಸಾಧ್ಯತೆ ಇರುವುದರಿಂದ ನಿರಂತರ ಕುಡಿಯುವ ನೀರು ಸರಬರಾಜು, ಶೌಚಾಲಯಗಳು, ಆರೋಗ್ಯ ತಪಾಸಣಾ ಕೇಂದ್ರಗಳು , ಅಂಬುಲೆನ್ಸ್ , ಅಗ್ನಿಶಾಮಕ ವಾಹನಗಳು ವ್ಯವಸ್ಥಿತವಾಗಿ ಇರುವಂತೆ ನೋಡಿಕೊಳ್ಳಬೇಕು. ದುರ್ಗಾಂಭಿಕ ದೇವಿಯ ರಥ ಸಂಚರಿಸುವ ಸ್ಥಳ ಮತ್ತು ದೇವಸ್ಥಾನದ ಸುತ್ತಮುತ್ತಲು ಗುಂಡಿಗಳನ್ನು ಮುಚ್ಚಬೇಕು. ಚರಂಡಿಗಳನ್ನು ಸ್ವಚ್ಚಗೊಳಿಸಬೇಕು, ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸುರಕ್ಷತೆ ಮತ್ತು ಸ್ವಚ್ಚತೆಗೆ ಹೆಚ್ಚು ಆದ್ಯತೆಯನ್ನು ನೀಡುವಂತೆ ತಿಳಿಸಿದರು. ದೇವಸ್ಥಾನದ ಸುತ್ತಮುತ್ತಲು, ಪ್ರಸಾದ ತಯಾರಿಸುವ ಸ್ಥಳದಲ್ಲಿ, ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ, ಸುಗಮ ಸಂಗೀತ, ಕ್ರೀಡೆಗಳು ಮತ್ತು ಅಗತ್ಯವಿರುವ ಸ್ಥಳದಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಿ ನಿಗಾವಹಿಸಬೇಕು ಎಂದರು.

ಪ್ರಾಣಿ ಬಲಿ ನಿಷೇಧ : ಪ್ರಾಣಿಗಳ ಬಲಿಯನ್ನು ದೇವಸ್ಥಾನ ಮತ್ತು ದೇವಸ್ಥಾನದ ಸುತ್ತಮುತ್ತಲು ನಿಷೇಧಿಸಲಾಗಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಹಿಲಿಯಂ ಗ್ಯಾಸ್ ಬಲೂನ್ ಗಳು ನಿಷೇಧ, ದೇವಸ್ಥಾನದ ಸುತ್ತಮುತ್ತಲು ಮದ್ಯ ಮಾರಾಟ ನಿಷೇದ, ಬೆತ್ತಲೆ ಮತ್ತು ಅರೆಬೆತ್ತಲೆ ಸೇವೆಯನ್ನು ನಿಷೇಧಿಸಲಾಗಿದೆ. ನಿಷೇದಿತ ವಸ್ತುಗಳ ಪ್ರದರ್ಶನವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಮೀರಿ ನಿಷೇಧಿತ ಕಾರ್ಯಗಳನ್ನು ಮಾಡಿದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣವಾಗಿ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

ಪ್ಲೇಕ್ಸ್ ಮತ್ತು ಬ್ಯಾನರ್ ಅಳವಡಿಕೆಗೆ ಕಡ್ಡಾಯವಾಗಿ ಅನುಮತಿಯನ್ನು ಪಡೆದು ಅಳವಡಿಸಬೇಕು ಇದಕ್ಕೆ ದೇವಸ್ಥಾನದ ಟ್ರಸ್ಟ್ ಸದಸ್ಯರುಗಳು ಸಹಕರಿಸಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖಾ ವತಿಯಿಂದ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶ್ರೀ ದುರ್ಗಾಂಭಿಕದೇವಿ ದೇವಸ್ಥಾನದ ಟ್ರಸ್ಟ್ ಸದಸ್ಯರುಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026