Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನಡ್ಡಾ ಭೇಟಿಯಾದ ಸಿಜೆಪಿ ನಿಯೋಗ; ಮೂರು ಬೇಡಿಕೆಗಳ ಮನವಿ ಸಲ್ಲಿಕೆ

ಹೊಸದಿಲ್ಲಿ, ಜುಲೈ 20: ನೀಟ್–ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ, ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಿಯೋಗವು ಸೋಮವಾರ ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮೂರು ಪ್ರಮುಖ ಬೇಡಿಕೆಗಳನ್ನೊಳಗೊಂಡ ಲಿಖಿತ ಮನವಿಯನ್ನು ಸಲ್ಲಿಸಿದೆ.

ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿಜೆಪಿ ವಕ್ತಾರರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಭಾಗವಹಿಸಿದ್ದರು. ಪ್ರತಿಭಟನಾಕಾರರ ಪರವಾಗಿ ಅವರು ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು.

ಮೊದಲನೆಯದಾಗಿ, ಜಂತರ್ ಮಂತರ್‌ನಲ್ಲಿ 22 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿ, ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ದರಜಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಣ ಸುಧಾರಕ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ ಅವರನ್ನು ತಕ್ಷಣವೇ ಆಸ್ಪತ್ರೆಯ ಕಾವಲಿನಿಂದ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಎರಡನೆಯದಾಗಿ, ದೇಶದ ಪ್ರತಿಷ್ಠಿತ ಪ್ರವೇಶ ಪರೀಕ್ಷೆಗಳಲ್ಲಿ ಸರಣಿ ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಕೇಂದ್ರ ಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಮೂರನೆಯದಾಗಿ, ನೀಟ್ ಪರೀಕ್ಷೆಯ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರವನ್ನು ಘೋಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಭೆಯಲ್ಲಿ ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದ ಜೆ.ಪಿ. ನಡ್ಡಾ, ಈ ವಿಷಯಗಳನ್ನು ಪಕ್ಷದ ಉನ್ನತ ನಾಯಕತ್ವ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಕೋರಿದ್ದಾರೆ ಎಂದು ಸಿಜೆಪಿ ತಿಳಿಸಿದೆ. ಮಾತುಕತೆ ಸೌಹಾರ್ದಯುತ ವಾತಾವರಣದಲ್ಲಿ ನಡೆದಿದ್ದು, ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ದೌರ್ಜನ್ಯ ಅಥವಾ ಕಾನೂನು ಕ್ರಮ ನಡೆಯದಂತೆ ನೋಡಿಕೊಳ್ಳಲಾಗುವುದು ಎಂಬ ಭರವಸೆಯನ್ನೂ ನೀಡಲಾಗಿದೆ ಎಂದು ಸಂಘಟನೆ ಹೇಳಿದೆ. ಆದರೆ ಬೇಡಿಕೆಗಳು ಈಡೇರುವವರೆಗೂ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಸಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ರಾಜಕೀಯ ವಲಯದಲ್ಲೂ ಬೆಳವಣಿಗೆಗಳು ವೇಗ ಪಡೆದಿವೆ. ಸಿಜೆಪಿ ನಿಯೋಗವು ನಡ್ಡಾ ಅವರನ್ನು ಭೇಟಿಯಾದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಸಂಸತ್ ಭವನ ಸಂಕೀರ್ಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಗಮನ ಸೆಳೆದಿದೆ.

ಮತ್ತೊಂದೆಡೆ, ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಹೋರಾಟಗಾರರು ಜಂತರ್ ಮಂತರ್‌ನಿಂದ ಸಂಸತ್ತಿನತ್ತ 'ಸಂಸತ್ ಚಲೋ' ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಕಣ್ಣೀರು ಅನಿಲ ಪ್ರಯೋಗಿಸಿ ಸೌಮ್ಯ ಬಲಪ್ರಯೋಗ ನಡೆಸಿದರು. ಸಿಜೆಪಿ ಸಂಸ್ಥಾಪಕ ಅಭಿಜೀತ ದಿಪ್ಕೆ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ