ಬೈಕ್ ಪಾರ್ಕಿಂಗ್ ವಿಚಾರ ವಿದ್ಯಾರ್ಥಿಗಳ ನಡುವೆ ಗಲಾಟೆ.! ಮೂವರಿಗೆ ಗಂಭೀರ ಗಾಯ.!
ಬೆಂಗಳೂರು: ಕ್ಷುಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮೂವರಿಗೂ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ರಾಜನಕುಂಟೆ ಖಾಸಗಿ ಕಾಲೇಜಿನ ಬಳಿ ಈ ಘಟನೆ ನಡೆದಿದೆ.
ಬೈಕ್ ಪಾರ್ಕಿಂಗ್ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೂವರು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಕಾಲೇಜಿನ ವಿದ್ಯಾರ್ಥಿಯೊಬ್ಬ ಆತನ ಸ್ನೇಹಿತರೊಂದಿಗೆ ಸೇರಿಕೊಂಡು, ಮತ್ತೊಂದು ವಿದ್ಯಾರ್ಥಿಗಳ ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಲ್ಮೆಟ್‍ಗಳಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.