LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

' ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ'- ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.

ಪ್ರತಿ ವರ್ಷ ಕನಕ ಉತ್ಸವ

ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.

ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು.ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಚರ್ಚಿಸಲಾಯಿತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026