LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ.!

ಬೆಂಗಳೂರು: ಸೋಮವಾರ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಬಗ್ಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿ ತಿಂಗಳು 1,25,08,262 ಇಂದಿರಾ ಆಹಾರ ಕಿಟ್ ಗಳು ಅಗತ್ಯವಿದ್ದು, ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ 5 ಕೆಜಿ ಹೆಚ್ಚುವರಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು ಎಂದು ಹೇಳಿದ್ದಾರೆ.

ಇದಕ್ಕಾಗಿ ಪ್ರತಿ ತಿಂಗಳು 466 ಕೋಟಿ ರೂಪಾಯಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಆಹಾರ ಕಿಟ್ ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿದ ತೊಗರಿ ಬೆಳೆಯನ್ನು ಗರಿಷ್ಠ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಆಗಬಾರದು, ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು, ಯಾವುದೇ ರೀತಿಯ ದೂರಿಗೆ ಅವಕಾಶ ನೀಡದಂತೆ ಪಾರದರ್ಶಕವಾಗಿ ಯೋಜನೆ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ತಂತ್ರಾಂಶ ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಆಹಾರ ಕಿಟ್ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ತಿಂಗಳ 10ನೇ ತಾರೀಖಿನ ಒಳಗಾಗಿ ಗೋದಾಮು, ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಬೇಕು ಎಂದು ಹೇಳಿದ್ದಾರೆ.

ಸಭೆಯಲ್ಲಿ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಫರ್ವೇಜ್ ಮೊದಲಾದವರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026