LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ, ಕಾರಂಜಿ ಉದ್ಘಾಟಿಸಿದ ಸಿಎಂ

ಬೆಳಗಾವಿ : ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.

ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ. ಕೆ.ಆರ್.ಎಸ್ ನ ಹಾಗೂ ಆಲಮಟ್ಟಿ ಉದ್ಯಾನವನಗಳ ಮಾದರಿಗಳನ್ನು ಅಳವಡಿಸಿಕೊಂಡು ಸುವರ್ಣ ವಿಧಾನಸೌಧದ ಈ ಉದ್ಯಾನವನವನ್ನು ಅಭಿವೃದ್ಧಿ ಪಡಿಸಲಾಗಿದೆ

ಸುವರ್ಣಸೌಧದ ಆವರಣದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ: ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಸುತ್ತಲು ನಿರ್ಮಿಸಿರುವ ಉದ್ಯಾನವನ ಹಾಗೂ ಸೌಂದರ್ಯೀಕರಣವು ಈ ಪ್ರದೇಶಕ್ಕೆ ನೂತನ ಮೆರಗನ್ನು ನೀಡಿದೆ.

ಒಟ್ಟು 4.63 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಯಾನವನ ಮತ್ತು ಸೌಂದರ್ಯೀಕರಣದ ಯೋಜನೆಯಡಿ ತೆರೆದ 2 ರಂಗಮಂದಿರವೂ ಇದ್ದು ಒಟ್ಟು 400 ಮಂದಿ ಕುಳಿತುಕೊಳ್ಳಬಹುದಾದ ವ್ಯವಸ್ಥೆ ಇದೆ. ಒಟ್ಟಾರೆ 8 ಕಾರಂಜಿಗಳನ್ನು ಉದ್ಯಾನವನದಲ್ಲಿ ಅಳವಡಿಸಲಾಗಿದ್ದು, ಕಲ್ಲಿನ ಮೆಟ್ಟಿಲುಗಳ ಜಲಪಾತ, ಮೂವತ್ತು ಬಗೆಯ ಗಿಡಗಳನ್ನು ನೆಡಲಾಗಿದೆ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026