LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ವರ್ಷ ಆಚರಣೆ: ಬಿಗಿ ಬಂದೋಬಸ್ತಿಗೆ ಖಾಕಿಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಸಭೆಯಲ್ಲಿ ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

• ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.

• ಮಹಾತ್ಮಾ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.

• ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.

• ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಅಂಬುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ.

• ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.

• ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು; ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅವರು ಎಚ್ಚರಿಕೆ ನೀಡಿದರು.

ಸಚಿವರಾದ ಡಾ. ಜಿ ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ ಎಂ ಎ ಸಲೀಂ , ಜಿ ಬಿ ಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್,
ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ