Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಂಸದೀಯ ಭಾಷೆ ಕಲಿತು ವಿಷಯ ತಜ್ಞರಾಗಿ: ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

 

ಬೆಂಗಳೂರು:
ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ. ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ದವಾಗಿ ಸದನದ ಮುಂದೆ ಮಂಡಿಸಬಹುದು ಎಂದರು.
ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ ಎಂದರು.
ಬಸವಣ್ಣನವರ ಬಜೆಟ್
ಶಾಸಕರು ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್ ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್ ನ ಮೌಲ್ಯ ಎಂದು ವಿವರಿಸಿದರು.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉಪಸ್ಥಿತರಿದ್ದರು. ನೂರು ಕುರಿ ಎಣಿಸಕ್ಕೆ ಬಾರದವನು
ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ “ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ?” ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜತೆ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ “THE HINDU” ಪತ್ರಿಕೆ ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ತಮ್ಮದೇ ಉದಾಹರಣೆ ಮೂಲಕ ಶಾಸಕರಿಗೆ ತಿಳಿ ಹೇಳಿದರು.
ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ ಶಾಸಕರಾಗಲು ಸಾಧ್ಯವಿರಲಿಲ್ಲ. ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ ಎಂದು ಮುಖ್ಯಮಂತ್ರಿ ಮನವರಿಕೆ ಮಾಡಿಸಿದರು.
ವಾಟಾಳ್ ಮಾಡೆಲ್
ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ ಎಂದು ಸೂಚಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ