LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪ್ರಕರಣ : ಸದ್ಯಕ್ಕೆ ‘SIT’ ರಚನೆ ಮಾಡಲ್ಲ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು : ಧರ್ಮಸ್ಥಳದಲ್ಲಿ ನಡೆದಿರಬಹುದಾದ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಇದೀಗ ಮೈಸೂರಿನಲ್ಲಿ ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಲೆಬುರುಡೆ ಪತ್ತೆ, ನಾಪತ್ತೆ ಪ್ರಕರಣಗಳ ಹೆಚ್ಚಳ ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ ಹೇಳಿಕೆಯೂ ಗಮನಾರ್ಹವಾಗಿದೆ. ಮಹಿಳಾ ಆಯೋಗವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಠಾಣೆಗಳು ಈ ಹಿಂದಿನ ನಾಪತ್ತೆ ಮತ್ತು ಸಾವು ಪ್ರಕರಣಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ ಎಂಬ ಗಂಭೀರ ಆರೋಪಗಳನ್ನೂ ಗುರುತಿಸಿದೆ.

ಕಳೆದ 20 ವರ್ಷಗಳಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವರದಿಯಾಗಿರುವ ನಾಪತ್ತೆಯಾದ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಸಮಗ್ರ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆಯ ಅಗತ್ಯವಿದೆ ಎಂದು ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026