LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹಾಸನ - ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದವಿಷಯ ತಿಳಿದು ದುಃಖವಾಯಿತು ಎಂದು ಬರೆದುಕೊಂಡಿದ್ದಾರೆ.

ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಮದು ಪೋಸ್ಟ್ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST