Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ: ಸಿಎಂ ಸಿದ್ದರಾಮಯ್ಯ

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ: ಸಿ.ಎಂ.ಸಿದ್ದರಾಮಯ್ಯ
ಚಂದ್ರವಳ್ಳಿ ನ್ಯೂಸ್, ಮೈಸೂರು:
ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು.

ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.



ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು  160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ರ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚಿಸಲಾಗಿದೆ ಎಂದರು.

ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ವೇದಿಕೆಯಲ್ಲೇ ಸೂಚನೆ ನೀಡಿದರು.

ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ