LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

38 ತಿಂಗಳ ಬಾಕಿ ವೇತನ ಹೆಚ್ಚಳ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ: ಸಾರಿಗೆ ನೌಕರರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 38 ತಿಂಗಳ ಬಾಕಿ ವೇತನ ಹೆಚ್ಚಳ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ 2020ರ ಜನವರಿ ಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯ ವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು ಪಟ್ಟು ಹಿಡಿದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ನಿಗಮಗಳ ಆರ್ಥಿಕ ಪರಿಸ್ಥಿತಿ, ವೇತನ ಹೆಚ್ಚಳಕ್ಕೆ ಸಂಬಂಧಿಸಿ 2023ರ ಮಾರ್ಚ್‌ನಲ್ಲಿ ಹಿಂದಿನ ಸರ್ಕಾರ ಮಾಡಿರುವ ಆದೇಶದಲ್ಲಿನ ದೋಷಗಳ ಕುರಿತು ನೌಕರ ಸಂಘಟನೆ ಪ್ರಮುಖರಿಗೆ ತಿಳಿಸಿದರು.

ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ವೇತನ ಹೆಚ್ಚಳ ಹಿಂಬಾಕಿ ನೀಡಲು ಸಿದ್ಧ ಎಂದು ಹೇಳಿದರು.

ಸಂಘಟನೆಗಳು ಕೇಳುತ್ತಿರುವಷ್ಟು ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸಾಧ್ಯವಿಲ್ಲ. 38 ತಿಂಗಳ ಬದಲು 14 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿಸಲಾಗುವುದು ಎಂದು ಭರವಸೆ ನೀಡಿದರು.

2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 2023ರ ಮೇ 01 ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.

ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್‌ 01 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು.

ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 2023ರ ಮಾರ್ಚ್‌ 01 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018 ರಲ್ಲಿ ಕೇವಲ ರೂ.14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು.

ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026