LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಗೆ ಸಿಎಂ ಸಿದ್ದರಾಮಯ್ಯ.!

 

ಮೈಸೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಈ ವರ್ಷದಿಂದಲೇ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿದರು.ಹಿಂದಿ ಭಾಷೆಯನ್ನು ಹೇರುವುದರ ವಿರುದ್ಧ ತಮ್ಮ ನಿಲುವನ್ನು ಪುನರುಚ್ಚರಿಸಿದ ಮುಖ್ಯಮಂತ್ರಿಗಳು, ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯ ಮಾಡಬಾರದು ಎಂಬುದು ಸರ್ಕಾರದ ನಿಲುವು. ಹಿಂದಿ ಕಲಿಯಬಾರದು ಎಂದು ನಾವು ಹೇಳುತ್ತಿಲ್ಲ, ಆದರೆ ಆ ಭಾಷೆಯ ಪರೀಕ್ಷೆಯನ್ನು ಕಡ್ಡಾಯಗೊಳಿಸಬಾರದು ಅಷ್ಟೆ ಎಂದರು.

ಯಾವುದೇ ಹೊಸ ನೀತಿ ಜಾರಿಗೆ ಬಂದಾಗ ಪರ ಮತ್ತು ವಿರೋಧ ಅಭಿಪ್ರಾಯಗಳು ಇರುವುದು ಸಹಜ, ಆದರೆ ಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಯಲ್ಲಿರುತ್ತದೆ. ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್ ಎಸ್ ಎಲ್ ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ.

ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026