LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ'- ಸಿಎಂ ಸಿದ್ದರಾಮಯ್ಯ

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.

ತೊಗರಿ ಪ್ಯಾಕೇಜ್
ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ. ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಯದೇವ ಮಹತ್ವದ ಹೆಜ್ಜೆ
ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371ಎ ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!ಸರ್ವಾರ್ಥ ಸಿದ್ಧಿ ಯೋಗ: ಲವರ್ ಸಪೋರ್ಟ್, ಶತ್ರುಗಳು ಉಡೀಸ್! ಈ 5 ರಾಶಿಗಳಿಗೆ ಶುಕ್ರದೆಸೆ