Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜಾತಿ ಗಣತಿ ವರದಿ ಜಾರಿಗೆ ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಮೈಸೂರು:
ಇನ್ನೂ ಸೌಲಭ್ಯಗಳಿಂದ ವಂಚಿತರಾಗಿರುವ ಜನರನ್ನು ಗುರುತಿಸುವ ಉದ್ದೇಶದಿಂದಲೇ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು
, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

 ಭಾನುವಾರ ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 ಸಾಮಾಜಿಕ ಗಣತಿ ವರದಿಯನ್ನು  ಸರ್ಕಾರ ಸ್ವೀಕರಿಸಿದ್ದು, ಆದರೆ ಹಲವು ಕಾರಣದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಜಾರಿಗೆ ಕ್ರಮಕೈಗೊಳ್ಳಲಾಗುವುದು. ಜಾತಿ ಜನಗಣತಿ ಕಾಂಗ್ರೆಸ್‌ಪಕ್ಷದ ಸಿದ್ದಾಂತವೂ ಆಗಿದೆ. ದೇಶದಲ್ಲಿ ಜನಸಂಖ್ಯೆಯ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ 1930ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದು ವಿವರಿಸಿದರು.

 ಹಿಂದುಳಿದವರಿಗೆ , ದಲಿತ- ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಸಂವಿಧಾನ ರಚಿಸಿದ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ಅವರ  ಉದೇಶವಾಗಿತ್ತು.  ಅವಕಾಶಗಳಿಂದ ವಂಚಿತರಾಗಿರುವುದರಿಂದಲೇ ಈ ಅಸಮಾನತೆ ಸೃಷ್ಟಿಯಾಗಿದ್ದು,

ಎಲ್ಲರಿಗೂ ಸಮಾನ ಅವಕಾಶವನ್ನು ಸಂವಿಧಾನದ ಮೂಲಕ ಕಲ್ಪಿಸಲು ಅವರು ಪ್ರಯತ್ನಿಸಿದರು. ಸಾಮಾಜಿಕ ಜವಾಬ್ದಾರಿಯನ್ನು ಈ ತಲೆಮಾರಿನಲ್ಲಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಪೀಠಿಕೆ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ರಾಜ್ಯದಾದ್ಯಂತ ನಾವು ಮಾಡಿದ್ದೇವೆ ಎಂದರು.

 ವೈಜ್ಞಾನಿಕ ಮನೋಭಾವವನ್ನು ಬೆಳೆಸಿ ಉತ್ತಮ ಮಾನವರಾಗಿ ರೂಪಿಸುವಂತಹ ಶಿಕ್ಷಣವೇ ಗುಣಮಟ್ಟದ ಶಿಕ್ಷಣವಾಗಿದೆ.  ಜಾತಿ ವ್ಯವಸ್ಥೆ, ಕಂದಾಚಾರ, ಮೌಢ್ಯಗಳಿಂದ ಮುಕ್ತರಾಗಿ ಕುವೆಂಪು ಹೇಳಿದ ಹಾಗೆ ವಿಶ್ವ ಮಾನವರಾಗಬೇಕಿದೆ. ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿಯಾದ ಜವಾಬ್ದಾರಿ ಬೆಳೆಯದೆ ಹೋದರೆ ವಿದ್ಯೆ ದೊರೆತು ಏನು ಪ್ರಯೋಜನ. ಪ್ರತಿಯೊಬ್ಬರೂ ಸಮಾಜ ಮುಖಿಯಾಗಿ ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂದು ಯೋಚಿಸಬೇಕಿದೆ ಎಂದು ಹೇಳಿದರು.

 ವಸತಿ ನಿಲಯಗಳಲ್ಲಿ ಕಲಿತವರು ಇಂದು ಅನೇಕ ಮಂದಿ ಉನ್ನತ ಸ್ಥಾನಗಳಲ್ಲಿದ್ದಾರೆ. ಈ ರೀತಿ ಉನ್ನತ ಹುದ್ದೆಗಳಲ್ಲಿರುವವರು ಸಮಾಜಕ್ಕೆ ಹಿಂತಿರುಗಿ ನೀಡಬೇಕಾಗಿದೆ. ನೀವು ಯಾವ ಕ್ಷೇತ್ರದಲ್ಲಿದ್ದೀರಿ ಅಲ್ಲಿ ಸಮಾಜದ ದೀನ ದಲಿತರಿಗಾಗಿ ನಿಮ್ಮ ಕೈಯಿಂದಾಗುವಷ್ಟು ಸಹಾಯ ಮಾಡಿ. ಇದುವೇ ನೀವು ಸಮಾಜಕ್ಕೆ ನೀಡುವ ಕೊಡುಗೆ. ಸಮಾಜದ ಋಣ ತೀರಿಸಿದರೆ ನಮ್ಮ ಜೀವನ ಸಾರ್ಥಕ.

 ಸಮಾಜದ ಬಗ್ಗೆ ಚಿಂತಿಸದೆ, ಕುಟುಂಬದ ಬಗ್ಗೆ ಮಾತ್ರ ಯೋಚಿಸುವವರು ಸ್ವಾರ್ಥಿಗಳಾಗುತ್ತಾರೆ. ಇಂತವರಿಂದಲೇ ಸಮಾಜದಲ್ಲಿ ವೃದ್ಧಾಶ್ರಮಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದರು.

 ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈಗಲೂ ಸಮಾಜದಲ್ಲಿ ಜಾತಿ ಶ್ರೇಣಿಯನ್ನು ಮುಂದುವರೆಸಲು ಪ್ರಯತ್ನಿಸುತ್ತಿದ್ದಾರೆ. ಅವರು ಈ ಸಮಾಜದಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಮುಂದೆ ಬರುವುದನ್ನು ಇಚ್ಛೆ ಪಡುವುದಿಲ್ಲ,

ಈ ಹಿನ್ನೆಲೆಯಲ್ಲಿ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ನೀಡಲು ಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಈಗ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದ ಎಲ್ಲಾ ಜಾತಿಯ ದುರ್ಬಲ ವರ್ಗಕ್ಕೆ ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡಲಾಗಿದೆ ಎಂದರು.

 ಸರಿಸಮಾನರಾಗಿ ಬದುಕುವ ಮೂಲಕ ಸಮಸಮಾಜ ನಿರ್ಮಾಣ-
ಹಿಂದುಳಿದ ವರ್ಗ , ಪರಿಶಿಷ್ಟ ಜಾತಿ ಪರಿಶಿಷ್ಠ ಪಂಗಡ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಕಡ್ಡಾಯವಾಗಿ ದೊರೆಯಬೇಕು. ಈ ನಿಟ್ಟನಲ್ಲಿ ವಿದ್ಯಾರ್ಥಿ ನಿಲಯಗಳು ಅತ್ಯಾವಶ್ಯಕ. ಜಾತಿ ವ್ಯವಸ್ಥೆ ಆರ್ಥಿಕ, ಸಾಮಾಜಿಕ ಅಸಮಾನತೆಗೆ ಕಾರಣವಾಗಿದ್ದು, ದುರ್ಬಲ ವರ್ಗದ ಜನರು ಅವಕಾಶದಿಂದಲೂ ವಂಚಿತರಾಗುತ್ತಿದ್ದಾರೆ.

ಸಮಾನ ಅವಕಾಶಗಳು ದೊರೆಯುವ ಮೂಲಕ ತುಳಿಕ್ಕೊಳಗಾದವರು ಜೀವನದಲ್ಲಿ ಅಭಿವೃದ್ಧಿ ಹೊಂದುವಂತಾಗಬೇಕು. ಯಾವುದೇ ಜಾತಿ ಧರ್ಮಗಳು ಕರ್ಮಸಿದ್ಧಾಂತವನ್ನು ಪ್ರತಿಪಾದಿಸುವುದಿಲ್ಲ. ಇತಿಹಾಸ ತಿಳಿದವರು ಮಾತ್ರ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂಬುದನ್ನು ಡಾ.ಬಿ.ಆರ್.ಅಂಬೇಡ್ಕರ್ ರವರು ತಿಳಿಸಿದ್ದಾರೆ. ಎಲ್ಲರೂ ಸರಿಸಮಾನರಾಗಿ ಬಾಳಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಬುದ್ಧ ಬಸವಾದಿ ಶರಣರು ಹಾಗೂ ಅಂಬೇಡ್ಕರ್, ಗಾಂಧಿಜೀ ಅವರ ಪ್ರತಿಪಾದನೆಯಾಗಿತ್ತು ಎಂದರು.

 1977 ವಿದ್ಯಾರ್ಥಿ ನಿಲಯಗಳು ಪ್ರಾರಂಭ-
ನಮ್ಮ ಸಂವಿಧಾನ ಜಾರಿಯಾಗುವ ಮೊದಲೇ ಮೈಸೂರು ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದಲ್ಲಿ ಮೀಸಲಾತಿಯನ್ನು ಜಾರಿಗೆ ತರಲಾಗಿತ್ತು. 1960 ರಲ್ಲಿ ನಾಗೇಗೌಡ ಸಮಿತಿ ರಚನೆಯಾಯಿತು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾವನೂರು ಆಯೋಗ ರಚಿಸಲಾಯಿತು. ವರದಿಗೆ ವಿರೋಧದ ನಡುವೆಯೂ ಜಾರಿಗೆ ತರಲಾಯಿತು.

1977 ರಲ್ಲಿ ಹಿಂದುಳಿದ ವರ್ಗಗಳ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಯಿತು. ವಿದ್ಯಾರ್ಥಿನಿಲಯಗಳಲ್ಲಿ ಶೇ.75 ರಷ್ಟು ಹಿಂದುಳಿದ ಜಾತಿಗಳ ಮಕ್ಕಳಿದ್ದರೆ, ಶೇ.25 ರಷ್ಟು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮಕ್ಕಳಿದ್ದಾರೆ. 1,87,000 ವಿದ್ಯಾರ್ಥಿಗಳು ಇಂದು ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದರು.

 ವಿದ್ಯಾರ್ಥಿದೆಸೆಯಲ್ಲಿನ ಸಂಕಷ್ಟಗಳನ್ನು ಸ್ಮರಿಸಿಕೊಂಡು ಸಿಎಂ-
ನಾನು  ಓದುವಾಗ ಮೀಸಲಾತಿ ವ್ಯವಸ್ಥೆ ಇಲ್ಲದಿದ್ದ ಕಾರಣ, ಉನ್ನತ ಶಿಕ್ಷಣಕ್ಕೆ ಅವಕಾಶ ದೊರಕಲಿಲ್ಲ. ಪಿಯುಸಿ, ಪದವಿ ಮಾಡುವ ಸಂದರ್ಭದಲ್ಲಿ  ವಸತಿ ವ್ಯವಸ್ಥೆ ಇಲ್ಲದೇ, ನಾನೇ ಒಂದು ರೂಂ ಮಾಡಿಕೊಂಡು ಓದುತ್ತಿದ್ದೆ.

ಆದ್ದರಿಂದ ವಿದ್ಯಾರ್ಥಿಗಳ ಕಷ್ಟಗಳ ಬಗ್ಗೆ ಅರಿತಿದ್ದ ನಾನು ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತಂದಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಕಾನೂನು ಪದವಿ ಓದಲು ತಾನು ಮಾಡಿದ ಸಂಘರ್ಷಗಳನ್ನೂ ವಿವರಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ