LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ - ಖಡಕ್ ಸೂಚನೆ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಪ್ರಮುಖವಾಗಿ ಎಸ್​​​ಸಿ ಹಾಗೂ ಎಸ್​​ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನೂ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಅವರಿಗೆ ಎಸ್‌ಸಿ ಎಸ್‌ಟಿ ಸಮುದಾಯದ ನೌಕರರ ಹಿತ ಕಾಯುವಂತೆ ಕೆಲವು ಕಟ್ಟುನಿಟ್ಟಿನ ಸಲಹೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ. ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟ‌ರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಿಗದಿಪಡಿಸಲಾಗಿದೆ. ಆದರೂ ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದೆ. ಅಲ್ಲಿನ ಕೆಲವು ಇಲಾಖೆಗಳ ಅಧಿಕಾರಿಗಳು ಇದನ್ನು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ ಈ ವಿಚಾರವಾಗಿ ನಿಮಗೂ ಕೂಡ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ.

ಅಲ್ಲದೆ ಇದರ ಜೊತೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರುವ ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೇ ಹೊರಡಿಸಿರುವ ಅದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ. ಇಲ್ಲದಿದ್ದರೆ ಅಧಿಕಾರಿಗಳ ಮಟ್ಟದಲ್ಲಿ ಅಸಮಧಾನ ಉಂಟಾಗಿ ಸರ್ಕಾರದ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯಲು ಕಷ್ಟವಾಗುತ್ತದೆ ಎಂಬುವುದಾಗಿ ಖರ್ಗೆ ಅವರು ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಎಚ್ಚರಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026