LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸದನದ ಗೌರವವನ್ನು ಎತ್ತಿಹಿಡಿಯಬೇಕು' - ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೊಟ್ಟೂ ಕೂಡ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ.

2245 ಕೋಟಿ ರೈತರಿಗೆ ಪರಿಹಾರ ನೀಡಲಾಗಿದೆ ಎಂದರು ಉತ್ತರ ನೀಡಿದರು. ಈ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷದವರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಸದನ ಮತ್ತೆ ಸೇರಿದಾಗ ಮಾತನಾಡಿದ ಮುಖ್ಯಮಂತ್ರಿಗಳು, ನಂತರ ವಿರೋಧ ಪಕ್ಷದ ನಾಯಕರು ಅಥವಾ ಸಭಾ ನಾಯಕರು ಮಾತನಾಡುವಾಗ ಮಧ್ಯೆ ಮಾತನಾಡುವುದು ಸರಿಯಲ್ಲ.

ವಿಧಾನಮಂಡಲದಲ್ಲಿ ಗುಣಾತ್ಮಕ ಚರ್ಚೆಗಳು ಕಡಿಮೆಯಾಗುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಸಂವಿಧಾನಾತ್ಮಕವಾಗಿ ಮಾತನಾಡುವಾಗ ಅಡ್ಡಿಪಡಿಸಬಾರದು. ವಿರೋಧ ಪಕ್ಷದವರು ಮಾತನಾಡುವಾಗ ಸುಮ್ಮ ಸುಮ್ಮನೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ನಾಯಕರು ಮಣಿದಾಗ ಮಾತ್ರ ಮಾತನಾಡಬೇಕು. ಯಾರೇ ಆದರೂ ಚರ್ಚೆಗೆ ಅಡ್ಡಿಪಡಿಸಬಾರದು ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026