LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಹಕಾರಿ ರಂಗದ ಭೀಷ್ಮ ನಾಡು ಮೆಚ್ಚಿದ ನಾಯಕ ಶ್ರೀ ಕೆ ಎಚ್ ಪಾಟೀಲ್ ರ 101 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


*ಸಹಕಾರಿ ಕ್ಷೇತ್ರದಲ್ಲಿ ಮಾಡದಿರುವ ಕೆಲಸವಿಲ್ಲ*
ಸಾಮಾನ್ಯ ಗ್ರಾಮದಲ್ಲಿ ಹುಟ್ಟಿ ಪಂಚಾಯತಿ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕೆ. ಎಚ್. ಪಾಟೀಲ್ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಇವರು ಮಾಡದಿರುವ ಕೆಲಸವಿಲ್ಲ. ಸಹಕಾರಿ ಕ್ಷೇತ್ರ ಮಾತ್ರವಲ್ಲದೆ, ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದರು. ದೇವರಾಜ ಅರಸು, ವೀರೇಂದ್ರ ಪಾಟೀಲ್ ಹಾಗೂ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದರು ಎಂದರು.

*ಕೆ.ಎಚ್ ಪಾಟೀಲರು ಬಡವರು , ದಲಿತರು, ಅಲ್ಪಸಂಖ್ಯಾತರಿಗೆ ಆರ್ಥಿಕ ಶಕ್ತಿ ತುಂಬಿದ್ದರು*
ಕೆ. ಹೆಚ್. ಪಾಟೀಲರ ಸಂಪರ್ಕ ರಾಜಕೀಯವಾಗಿ ಕಡಿಮೆಯಿದ್ದರೂ ಅವರು ಸಚಿವರಾಗಿ ಮಾಡುತ್ತಿದ್ದ ಕೆಲಸವನ್ನು ಗಮನಿಸುತ್ತಿದ್ದೆ. . ಓದು ಕಡಿಮೆಯಿದ್ದರೂ ಜನಪರವಾದ ಅಪಾರ ಕಾಳಜಿಯನ್ನು ಹೊಂದಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಬಡವರು, ದಲಿತರು, ಅಲ್ಪಸಂಖ್ಯಾತರಲ್ಲಿ ಶಕ್ತಿ ತುಂಬುವ ಕೆಲಸ ಮಾಡಿದ್ದನ್ನು ಸ್ಮರಿಸಬೇಕು ಎಂದರು. ಕೆ ಎಚ್ ಪಾಟೀಲ್ ರ ಪುತ್ರ, ಸಚಿವರೂ ಆದ ಹೆಚ್.ಕೆ.ಪಾಟೀಲರು ಅವರ ತಂದೆಯವರು ನಡೆದ ದಾರಿಯಲ್ಲಿ ನಡೆಯುತ್ತಿದ್ದು, ಅವರಿಗಿಂತಲೂ ಹೆಚ್ಚು ಬೆಳೆಯಲಿ ಎಂದು ಆಶಿಸಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾ ಉಪಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಸಚಿವರಾದ ಕೆ. ಹೆಚ್.ಮುನಿಯಪ್ಪ, ಹೆಚ್. ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಎನ್. ಎಸ್ ಬೋಸರಾಜು, ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜರಾಯ ರೆಡ್ಡಿ, ಶಾಸಕರು, ಉಪಸ್ಥಿತರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ